

ಹುಬ್ಬಳ್ಳಿ: ರಂಜಾನ್ ಹಬ್ಬದ ಹಿನ್ನೆಲೆ ಮುಸ್ಲಿಮರು ಎಲ್ಲೆಡೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭ ಕೋರಿದ ದೃಶ್ಯ ಕಂಡುಬಂತು. ಹುಬ್ಬಳ್ಳಿಯ ಚನ್ನಮ್ಮ ವೃತ್ತ ಸಮೀಪ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಕೋವಿಡ್ ಲಾಕ್ಡೌನ್ ಕಾರಣ ಎರಡು ವರ್ಷ ರಂಜಾನ್ ವೇಳೆ ಸಾಮೂಹಿಕ ಪ್ರಾರ್ಥನೆ ಮಾಡಿರಲಿಲ್ಲ. ಈ ಬಾರಿ ಅವಕಾಶ ಸಿಕ್ಕ ಹಿನ್ನೆಲೆಯಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು. ಪರಸ್ಪರ ಶುಭ ಕೋರಿದರು. ಮುಸ್ಲಿಂ ಧರ್ಮಗುರುಗಳು, ಮುಖಂಡರು, ಶಾಸಕ ಪ್ರಸಾದ ಅಬ್ಬಯ್ಯ ಮತ್ತಿತರರು ಪಾಲ್ಗೊಂಡಿದ್ದರು.
ಹಳೇ ಹುಬ್ಬಳ್ಳಿ ಈದ್ಗಾ ಮೈದಾನದಲ್ಲೂ ಸಂಭ್ರಮದಿಂದ ರಂಜಾನ್ ಆಚರಿಸಲಾಯಿತು. ಎಲ್ಲೆಡೆ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು.