ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಅಪರೂಪದ ಛಾಯಾಚಿತ್ರ ಪ್ರದರ್ಶನ

4
Published on

ಮೈಸೂರು: ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಸೋಮವಾರ ಪತ್ರಕರ್ತರ ಭವನದಲ್ಲಿ ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಅಪರೂಪದ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು. ಮೈಸೂರಿನ ಪತ್ರಿಕಾ ಛಾಯಾಗ್ರಾಹಕರು ಸೆರೆ ಹಿಡಿದಿದ್ದ ಅಪರೂಪದ ಛಾಯಾಚಿತ್ರಗಳ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.

ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ್ ಸುವರ್ಣ ಪ್ರದರ್ಶನ ಉದ್ಘಾಟಿಸಿ, ಈ ಹಿಂದೆ ಎಂತಹ ಪ್ರಮುಖ ರಾಜಕಾರಣಿ ಹಾಗೂ ವ್ಯಕ್ತಿಯನ್ನೂ ಛಾಯಾಚಿತ್ರಕ್ಕಾಗಿ ಭಂಗಿ ನೀಡಿ ಎಂದು ಕೇಳುವ ಗತ್ತು ಪತ್ರಿಕಾ ಛಾಯಾಗ್ರಾಹಕರಿಗೆ ಇತ್ತು. ಆದರೆ ಅದು ಈಚಿನ ವರ್ಷಗಳಲ್ಲಿ ಕಡಿಮೆ ಆಗುತ್ತಿದೆ ಎಂದರು.

ನಗರ ಪಾಲಿಕೆ ಆಯುಕ್ತ ಅಶಾದ್ ಉರ್ ರೆಹಮಾನ್ ಷರ್ೀ ಮಾತನಾಡಿ, ಮಹಾನಗರ ಪಾಲಿಕೆಯಲ್ಲಿ ಅಧಿಕಾರ ವಹಿಸಿಕೊಂಡಂದಿನಿಂದಲೂ ಈ ನಗರವನ್ನು ಇನ್ನಷ್ಟು ಮೇಲಕ್ಕೆ ಕೊಂಡೊಯ್ಯಬೇಕೆಂದು ಶ್ರಮಿಸುತ್ತಿದ್ದೇನೆ. ಈ ನಿಟ್ಟಿನಲ್ಲಿ ಪತ್ರಕರ್ತರು ನೀಡುತ್ತಿರುವ ಸಲಹೆ ಸೂಚನೆಗಳನ್ನು ಸ್ವೀಕರಿಸಲಾಗುವುದು ಎಂದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್, ಪತ್ರಿಕಾ ಛಾಯಾಗ್ರಾಹಕರಾದ ಪ್ರಗತಿ ಗೋಪಾಲಕೃಷ್ಣ, ಎಸ್.ಆರ್.ಮಧುಸೂದನ್ ಸೇರಿದಂತೆ ಹಲವು ಮಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net