

ಚಳ್ಳಕೆರೆ: ಪತ್ರಕರ್ತರ ಬಹುವರ್ಷಗಳ ಬೇಡಿಕೆ ಈಡೇರಿಸುವಂತೆ ರಾಜ್ಯ ಮಾಧ್ಯಮ ಮಹಾ ಒಕ್ಕೂಟದ ಅಧ್ಯಕ್ಷ ಕೆ.ಶಿವಕುಮಾರ್ ಹಾಗೂ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮನವಿ ಸಲ್ಲಿಸಿರುವ ಪದಾಧಿಕಾರಿಗಳು, ಗ್ರಾಮೀಣ ಪತ್ರಕರ್ತರಿಗೆ ನಿವೇಶನ, ಬಸ್ ಉಚಿತ ಪ್ರಯಾಣ, ಆರೋಗ್ಯ ವಿಮೆ, ಪತ್ರಕರ್ತರ ನಿಗಮ ಮಂಡಳಿ ಸ್ಥಾಪನೆ, ತಾಲೂಕು ಪತ್ರಕರ್ತರ ಭವನ ನಿರ್ಮಾಣ, ನಗರ ಪ್ರದೇಶದಲ್ಲಿ ಪ್ರತ್ಯೇಕ ಬಡಾವಣೆ, ಮಾಶಾಸನ, ಮಾಧ್ಯಮದವರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಗುಂಡಾ ಕಾಯ್ದೆ ಜಾರಿ, ಹಲ್ಲೆಗೊಳಗಾದ ಪತ್ರಕರ್ತರಿಗೆ ಐದು ಲಕ್ಷ ರೂ., ಅಪಘಾತದಲ್ಲಿ ಮೃತಪಟ್ಟವರಿಗೆ 25 ಲಕ್ಷ ರೂ. ಪರಿಹಾರ, ಮಕ್ಕಳಿಗೆ ವಿದ್ಯಾರ್ಥಿ ವೇತನ ಸೇರಿ ವಿವಿಧ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ.