ಅಳಿವೆ ಹೂಳೆತ್ತವಂತೆ ಸಚಿವರಿಗೆ ಮನವಿ

meenugarike bandaru
ಗಂಗೊಳ್ಳಿ ಮೀನುಗಾರಿಕೆ ಬಂದರು ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿ ಬಂದರು ಮತ್ತು ಮೀನುಗಾರಿಕೆ ಇಲಾಖೆಯ ಜೆಇ ಭಾನುಪ್ರಕಾಶ್ ಅವರು ಬಂದರು ಹಾಗೂ ಅಳಿವೆ ಪ್ರದೇಶ ವೀಕ್ಷಿಸಿದರು.
Published on

ಗಂಗೊಳ್ಳಿ: ಗಂಗೊಳ್ಳಿ ಮೀನುಗಾರಿಕೆ ಬಂದರಿನಲ್ಲಿ ಹಾಗೂ ಅಳಿವೆಯಲ್ಲಿ ತುರ್ತು ಹೂಳೆತ್ತುವ ಕಾರ್ಯ ನಡೆಸಬೇಕೆಂದು ಗಂಗೊಳ್ಳಿ ಹಸಿ ಮೀನು ವ್ಯಾಪಾರಸ್ಥರ ಮತ್ತು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ನಿಯೋಗ ರಾಜ್ಯದ ಮೀನುಗಾರಿಕೆ ಇಲಾಖೆ ಸಚಿವ ಮಂಕಾಳ ವೈದ್ಯ ಅವರನ್ನು ಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಿತು.

ಮೀನುಗಾರರ ಬೇಡಿಕೆಗಳಿಗೆ ಸ್ಪಂದಿಸಿದ ಸಚಿವ ಮಂಕಾಳ ವೈದ್ಯ ಅವರು, ಹೂಳೆತ್ತುವ ಬಗ್ಗೆ ಇಲಾಖೆ ಅಧಿಕಾರಿಗಳ ಮೂಲಕ ವರದಿ ತರಿಸಿಕೊಂಡು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಸಚಿವರ ಸೂಚನೆ ಮೇರೆಗೆ ಗಂಗೊಳ್ಳಿ ಮೀನುಗಾರಿಕೆ ಬಂದರು ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿ, ಬಂದರು ಮತ್ತು ಮೀನುಗಾರಿಕೆ ಇಲಾಖೆ ಜೆಇ ಭಾನುಪ್ರಕಾಶ್ ಅವರು ಬಂದರು ಹಾಗೂ ಅಳಿವೆ ಪ್ರದೇಶ ವೀಕ್ಷಿಸಿ ಅಳಿವೆಯಲ್ಲಿ ತುರ್ತು ಹೂಳೆತ್ತುವ ಕಾಮಗಾರಿ ಪ್ರಾರಂಭಿಸುವ ಬಗ್ಗೆ ಇಲಾಖೆ ಹಿರಿಯ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.
ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಮೀನುಗಾರ ಮುಖಂಡರಾದ ರಾಮಪ್ಪ ಖಾರ್ವಿ, ರಾಘವೇಂದ್ರ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net