ರಸ್ತೆ ದುರಸ್ತಿಗೊಳಿಸಲು ಪುರಸಭೆಗೆ ಮನವಿ

Road Repair
Published on

ಲಕ್ಷ್ಮೇಶ್ವರ: ಪಟ್ಟಣದಲ್ಲಿರುವ ಅವಶ್ಯಕ ರಸ್ತೆಗಳನ್ನು ದುರಸ್ತಿ ಮಾಡಿಸಬೇಕು ಎಂದು ಆಗ್ರಹಿಸಿ ತಾಯಿ ಪಾರ್ವತಿ ಮಕ್ಕಳ ಬಳಗದ ಶಿಕ್ಷಕರು ಮತ್ತು ಸಾರ್ವಜನಿಕರು ಬುಧವಾರ ಪುರಸಭೆ ಸಿಬ್ಬಂದಿ ಮಂಜುಳಾ ಹೂಗಾರಗೆ ಮನವಿ ಸಲ್ಲಿಸಿದರು.

ಪಟ್ಟಣದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳಿದ್ದು, ಅವುಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ, ಅನೇಕ ಓಣಿಗಳಲ್ಲಿ ರಸ್ತೆಗಳು ಕೆಟ್ಟು ಹೋಗಿದ್ದು, ಇದರಿಂದ ವಿದ್ಯಾರ್ಥಿಗಳು ಶಾಲೆಗೆ ಬರಲು ತೊಂದರೆ ಅನುಭವಿಸುತ್ತಿದ್ದಾರೆ. ತಾಯಿ ಪಾರ್ವತಿ ಮಕ್ಕಳ ಬಳಗವು ಅನೇಕ ವರ್ಷಗಳಿಂದ ಶೈಕ್ಷಣಿಕವಾಗಿ ಸಾಕಷ್ಟು ಸಾಧನೆ ಮಾಡಿದ್ದು, ಸಂಸ್ಥೆಯ ಶಾಲೆಗಳು ತೋಂಟದೇವರಮಠದ ಆವರಣದಲ್ಲಿ ನಡೆಯುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿಗೆ ಬರುವ ಮಕ್ಕಳಿಗೆ ರವಿ ಚಿತ್ರಮಂದಿರದ ಕಡೆಯಿಂದ ಬರುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ಈ ರಸ್ತೆಯಿಂದ ಬರುವ ನೂರಾರು ವಿದ್ಯಾರ್ಥಿಗಳಿಗೆ ಅನಾನುಕೂಲ ಉಂಟಾಗುತ್ತಿದೆ. ಅಲ್ಲದೆ ಪಾಲಕರು ಈ ರಸ್ತೆಯಲ್ಲಿ ವಾಹನಗಳಲ್ಲಿ ಮಕ್ಕಳನ್ನು ಕರೆದು ತರುವಾಗ ಸಾಕಷ್ಟು ಹೀಗಾಗಿ ರಸ್ತೆಯನ್ನು ದುರಸ್ತಿಗೊಳಿಸಿಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net