ಸಮಾಜಕ್ಕೆ ಸದ್ಬಳಕೆಯಾಗಲಿ ಸಂಪನ್ಮೂಲ

mundaragi
ಮುಂಡರಗಿ ಪಟ್ಟಣದ ಕ.ರಾ.ಬೆಲ್ಲದ ಮಹಾವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಶ್ರೀಜಗದ್ಗುರು ಅನ್ನದಾನೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಾಡೋಜ ಡಾ.ಅನ್ನದಾನೀಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು. ಸುಶೀಲೇಂದ್ರಾಚಾರ್ಯ ಕುಂದರಗಿ, ರಾಜು ಹೆಬ್ಬಳ್ಳಿ, ಹು.ಬಾ. ವಡ್ಡಟ್ಟಿ ಇತರರಿದ್ದರು.
Published on

ಮುಂಡರಗಿ: ನಾವು ಗಳಿಸುವಂತ ಆಸ್ತಿ, ಅಂತಸ್ತು, ಧನ, ಕನಕಗಳು ಸದ್ಬಳಕೆಯಾಗಬೇಕು. ಹೀಗಾಗಿ ಜಗದ್ಗುರು ಅನ್ನದಾನೀಶ್ವರ ಮಠದಿಂದ ಪ್ರತಿವರ್ಷ ತಾಲೂಕಿನ ನೂರಾರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತಿದೆ. ಪ್ರಸ್ತುತ ವರ್ಷದಿಂದ ಪತ್ರಕರ್ತರಿಗೆ, ಶಿಕ್ಷಕರಿಗೆ, ಸೈನಿಕರಿಗೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಜಗದ್ಗುರು ಅನ್ನದಾನೀಶ್ವರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ ಎಂದು ನಾಡೋಜ ಡಾ.ಅನ್ನದಾನೀಶ್ವರ ಮಹಾಸ್ವಾಮೀಜಿ ಹೇಳಿದರು.

ಪಟ್ಟಣದ ಕ.ರಾ.ಬೆಲ್ಲದ ಮಹಾವಿದ್ಯಾಲಯದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಹಾಗೂ ಶ್ರೀಜಗದ್ಗುರು ಅನ್ನದಾನೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ಪತ್ರಕರ್ತ ಸುಶೀಲೇಂದ್ರಾಚಾರ್ಯ ಕುಂದರಗಿ ಮಾತನಾಡಿ, ಪತ್ರಿಕೆಗಳು ಉತ್ತಮ ಸುದ್ದಿಗಳ ಪ್ರಸಾರ ಮಾಡುವುದರ ಜೊತೆಗೆ ಸಾಮಾಜಿಕ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತಿವೆ ಎಂದರು.

ರಾಜ್ಯ ಕಾರ್ಯನಿತರ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ ಮಾತನಾಡಿ, ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರನ್ನು ಪ್ರೋತ್ಸಾಹಿಸಲು ಮೊದಲ ಬಾರಿಗೆ ತಾಲೂಕು ಮಟ್ಟದ ಪತ್ರಕರ್ತರಿಗೆ ಪ್ರಶಸ್ತಿ ನೀಡಿದ ಹೆಗ್ಗಳಿಕೆ ಮುಂಡರಗಿ ಜಗದ್ಗುರು ಅನ್ನದಾನೀಶ್ವರ ಶ್ರೀಗಳಿಗೆ ಸಲ್ಲುತ್ತದೆ ಎಂದರು.

ಹಿರಿಯ ಪತ್ರಕರ್ತ ಸಿ.ಎಸ್.ಅರಸನಾಳ ಅವರಿಗೆ 10 ಸಾವಿರ ರೂ. ನಗದು ಸಹಿತ ಶ್ರೀಜಗದ್ಗುರು ಅನ್ನದಾನೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪತ್ರಿಕಾ ವಿತರಕ ಪ್ರಕಾಶ ಅತ್ತರವಾಲ್ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹು.ಬಾ.ವಡ್ಡಟ್ಟಿ, ತಾ.ಪಂ. ಇಒ ವಿಶ್ವನಾಥ ಹೊಸಮನಿ, ಹೇಮಗಿರೀಶ ಹಾವಿನಾಳ, ಡಿ.ಡಿ.ಮೋರನಾಳ, ಉದಯಕುಮಾರ ಯಲಿವಾಳ ಮಾತನಾಡಿದರು. ತಹಸೀಲ್ದಾರ್ ಧನಂಜಯ ಎಂ., ಡಾ. ಬಿ.ಜಿ. ಜವಳಿ, ಡಾ. ಡಿ.ಸಿ. ಮಠ, ಶರಣು ಸೊಲಗಿ, ಮಲ್ಲಿಕಾರ್ಜುನಗೌಡ ಪಾಟೀಲ, ಮಂಜುನಾಥ ಜಾಗಟಗೇರಿ ಇದ್ದರು. ಕಾಶಿನಾಥ ಬಿಳಿಮಗ್ಗದ ಪ್ರಾಸ್ತವಿಕವಾಗಿ ಮಾತನಾಡಿದರು. ಸಿ.ಕೆ. ಗಣಪ್ಪನವರ ಸ್ವಾಗತಿಸಿದರು. ಸಂತೋಷ ಮುರಡಿ ನಿರೂಪಿಸಿದರು. ಶಿವು ಹೊಂಬಳಗಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net