

ಶಿವಮೊಗ್ಗ: ಸಚಿವ ಕೆ.ಎನ್.ರಾಜಣ್ಣ ಹೇಳಿದಂತೆ ಮುಂದೆ ಕಾಂಗ್ರೆಸ್‌ನಲ್ಲಿ ಕ್ರಾಂತಿ ಆಗುವುದು ನಿಶ್ಚಿತ. ಅದು ಸರ್ಕಾರ ಬೀಳಿಸುತ್ತದೋ ಅಥವಾ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಇಳಿಯುತ್ತಾರೋ ಎಂಬುದು ಗೊತ್ತಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಕೆ.ಎಸ್.ಈಶ್ವರಪ್ಪ ಹೇಳಿದರು.
ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕೇವಲ 40 ಶಾಸಕರನ್ನು ಕರೆದು ಸಭೆ ನಡೆಸುತ್ತಿದ್ದಾರೆ. 136 ಶಾಸಕರಲ್ಲಿ 40 ಮಾತ್ರ ಏಕೆ ಗುಂಪು ಕಟ್ಟಿಕೊಂಡು ಚರ್ಚೆ ಮಾಡುತ್ತಾರೆ ಎಂಬುದು ಮುಂದೆ ಗೊತ್ತಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು.
ಪ್ರಮುಖರಾದ ವಾಗೀಶ್, ಲೋಕೇಶ್, ಎಸ್.ಜಿ.ಬಾಲು, ಸೋಗಾನೆ ರಮೇಶ್, ಜಾದವ್, ರಾಜು, ಶಿವಕುಮಾರ್, ಕುಬೇರಪ್ಪಸುದ್ದಿಗೋಷ್ಠಿಯಲ್ಲಿದ್ದರು.