ಸಿದ್ದರಾಮಯ್ಯರ ವರ್ಚಸ್ಸು ಕುಗ್ಗಿಸಲು ಕುತಂತ್ರ

A ruse to undermine Siddaramaiah's charisma
Published on

ಹರಿಹರ: ಸಿದ್ದರಾಮಯ್ಯ ಅವರ ವರ್ಚಸ್ಸು ಕುಗ್ಗಿಸಿ ಕಳಂಕ ತರಲು ಬಿಜೆಪಿ ಮತ್ತು ಜೆಡಿಎಸ್ ಸೇರಿ ನಡೆಸುತ್ತಿರುವ ಕುತಂತ್ರ ಎಂದಿಗೂ ಫಲಿಸುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಎನ್.ಎಚ್. ಶ್ರೀನಿವಾಸ್ ನಂದಿಗಾವಿ ಹೇಳಿದರು.

ಹರಿಹರ ಮತ್ತು ಮಲೇಬೆನ್ನೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನ್ಯಾಯಾಲಯದ ಆದೇಶದಂತೆ ಮುಖ್ಯಮಂತ್ರಿ ತನಿಖೆ ಎದುರಿಸುತ್ತಾರೆ. ಆದರೆ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಬಿಜೆಪಿ, ಜೆಡಿಎಸ್ ಮುಖಂಡರಿಗೆ ರಾಜೀನಾಮೆ ಕೇಳಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ 132 ಶಾಸಕರು ಕಾಂಗ್ರೆಸ್‌ನಿಂದ ಗೆದ್ದಿರುವುದು ಅವರಿಗೆ ಸಹಿಸಲಾಗುತ್ತಿಲ್ಲ. ಆದ್ದರಿಂದ ಸಿದ್ದರಾಮಯ್ಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.

ಹೈಕೋರ್ಟ್ ತನಿಖೆಗೆ ಮಾತ್ರ ಹಸಿರು ನಿಶಾನೆ ತೋರಿದ್ದು, ಯಾವುದೇ ತಪ್ಪು ಮಾಡದ ಸಿದ್ದರಾಮಯ್ಯ ಎಲ್ಲ ತನಿಖೆ ಎದುರಿಸಿ, ಕ್ಲೀನ್‌ಚಿಟ್ ಪಡೆದು ಹೊರಬರುತ್ತಾರೆ. ತಾಲೂಕು ಕಾಂಗ್ರೆಸ್ ಸೇರಿದಂತೆ ದೇಶಾದ್ಯಂತ ಕಾಂಗ್ರೆಸ್ ಸಿಎಂಗೆ ಬೆಂಬಲವಾಗಿ ನಿಲ್ಲಲಿದೆ ಎಂದರು.

ಕೆಪಿಸಿಸಿ ಸದಸ್ಯ ಬಿ. ರೇವಣಸಿದ್ದಪ್ಪ, ನಗರಸಭೆ ಮಾಜಿ ಸದಸ್ಯ ಸಿಗ್ಬತ್ ಉಲ್ಲಾ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ, ಮಲೇಬೆನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬಿದಲಿ, ಮುಖಂಡರಾದ ಟಿ.ಜೆ. ಮುರುಗೇಶಪ್ಪ, ಕೆ. ಜಡಿಯಪ್ಪ, ಮಹಮ್ಮದ್ ಫೈರೋಜ್, ಮಲ್ಲಿನಾಥ್, ಜೆ.ಆರ್. ರೋಷನ್, ರಾಘವೇಂದ್ರ, ಕೊಟ್ರೇಶ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net