ಯೂಕ್ರೇನ್​ನಿಂದ ಆಗಮಿಸುವ ಕನ್ನಡಿಗರ ನೆರವಿಗೆ ಇಬ್ಬರು ಅಧಿಕಾರಿಗಳ ನೇಮಕ: ಸಿಎಂ

bommai
Published on

ಬೆಂಗಳೂರು: ಯೂಕ್ರೇನ್​ನಿಂದ ಕನ್ನಡಗರನ್ನು ಕರೆತರುವ ಪ್ರಯತ್ನ ನಿರಂತರವಾಗಿ ಜಾರಿಯಲ್ಲಿದ್ದು, ಮುಂಬೈ ಹಾಗೂ ನವದೆಹಲಿಗೆ ಬರುತ್ತಿರುವ ವಿದ್ಯಾರ್ಥಿಗಳನ್ನು ಅವರ ಊರುಗಳಿಗೆ ಕಳುಹಿಸುವ ನಿಟ್ಟಿನಲ್ಲಿ ನೆರವು ಒದಗಿಸಲು ಮುಂಬೈನಲ್ಲಿ ಇಬ್ಬರು ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಯೂಕ್ರೇನ್​ನ ಈಶಾನ್ಯ ಭಾಗದಲ್ಲಿರುವ ಕನ್ನಡದ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದಾರೆ. ವಿದೇಶಾಂಗ ಸಚಿವರೊಂದಿಗೆ ಮಾತನಾಡಿ ಅವರಿಗೆ ಊಟ ವಸತಿ ವ್ಯವಸ್ಥೆ ಮಾಡಲು ಹಾಗೂ ಅವರನ್ನು ಸುರಕ್ಷಿತ ಸ್ಥಳಗಳಿಗಳಿಗೆ ಕಳುಹಿಸಲು ಮಾರ್ಗದರ್ಶನ ನೀಡುವಂತೆ ಕೋರಲಾಗಿದೆ ಎಂದರು. ರೋಮಾನಿಯಾ ಗಡಿಯಲ್ಲಿ ದಟ್ಟಣೆಯಾಗುತ್ತಿದ್ದು, ಕನ್ನಡಿಗರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲು ಕೋರಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net