ಮಂಡ್ಯ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಉಮೇಶ್​ಗೆ 'ಸಹಕಾರ ರತ್ನ' ಪ್ರಶಸ್ತಿ

mandya mdcc bank
Published on

ಮಂಡ್ಯ: ಜಿಲ್ಲಾ ಸಹಕಾರ ಬ್ಯಾಂಕ್(ಎಂಡಿಸಿಸಿ) ಅಧ್ಯಕ್ಷ ಸಿ.ಪಿ.ಉಮೇಶ್‌ ಅವರಿಗೆ 'ಸಹಕಾರ ರತ್ನ' ಪ್ರಶಸ್ತಿ ಒಲಿದಿದೆ.

ಸಹಕಾರ ಚಳವಳಿಯ ಬೆಳವಣಿಗೆಗೆ ಉಮೇಶ್​ ಅವರು ಸಲ್ಲಿಸಿರುವ ಅನುಪಮ ಸೇವೆ ಗುರುತಿಸಿ ರಾಜ್ಯ ಸಹಕಾರ ಮಹಾಮಂಡಳ ನಿಯಮಿತವು ಪ್ರಶಸ್ತಿ ಘೋಷಣೆ ಮಾಡಿದೆ. ಮಾ.20ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡುವರು. ಪ್ರಶಸ್ತಿ ಪುರಸ್ಕೃತರಿಗೆ ಪತ್ರದ ಮೂಲಕ ವ್ಯವಸ್ಥಾಪಕ ನಿರ್ದೇಶಕರು ಆಹ್ವಾನ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net