ರಾಜೀನಾಮೆ ಸಲ್ಲಿಸುವ ಪರಿಸ್ಥಿತಿ ಬರುತ್ತದೆ

mahesh T
Published on

ಹುಬ್ಬಳ್ಳಿ: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಪರಿಸ್ಥಿತಿ ಬಂದೇ ಬರುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇರುವುದು ಸಾಮಾನ್ಯ ಜನರಿಗೂ ಗೊತ್ತಾಗುತ್ತದೆ. ರಾಜ್ಯಪಾಲರು, ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದು ಸಮಂಜಸ ಕ್ರಮವಾಗಿದೆ ಎಂದರು.

ಶಾಲಾ ವಿದ್ಯಾರ್ಥಿಗೆ ಹಿಜಾಬ್ ಧರಿಸಲು ಅಡ್ಡಿಪಡಿಸಿದ್ದರು ಎಂಬ ಕಾರಣಕ್ಕೆ ಉಡುಪಿಯ ಶಿಕ್ಷಕರೊಬ್ಬರ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ತಡೆ ಹಿಡಿದಿರುವುದು ಅಕ್ಷಮ್ಯ. ಇದು ತುಷ್ಟೀಕರಣದ ಪರಮೋಚ್ಛ ಸ್ಥಿತಿಯಾಗಿದೆ. ನನಗೆ ಎಲ್ಲ ಜಾತಿ, ಧರ್ಮದವರು ವಿದ್ಯೆ ಕಲಿಸಿದ್ದಾರೆ. ಗುರುಗಳಲ್ಲಿ ಜಾತಿ, ಧರ್ಮ ಇರುವುದಿಲ್ಲ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net