ಮಾಗಡಿಯಲ್ಲಿ ಶಾಲಾ ಬಸ್​ ಅಪಘಾತ: 25ಕ್ಕೂ ಹೆಚ್ಚು ಮಕ್ಕಳು ಪ್ರಾಣಾಪಾಯದಿಂದ ಪಾರು

school bus accident
Published on

ರಾಮನಗರ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಬಸ್​, ಚಾಲನ ನಿಯಂತ್ರಣತಪ್ಪಿ ಹಳ್ಳಕ್ಕೆ ಬಿದ್ದ ಘಟನೆ ಬುಧವಾರ ಬೆಳಗ್ಗೆ ಮಾಗಡಿ ತಾಲೂಕು ಹುಲಿಕಲ್ ಗ್ರಾಮದ ಬಳಿ ಸಂಭವಿಸಿದೆ.

ಹುಲಿಕಲ್ ಗ್ರಾಮದ ಮಾನಸ ಗಂಗೋತ್ರಿ ಶಾಲಾ ಬಸ್ ಇದಾಗಿದ್ದು, ಬಸ್​ನಲ್ಲಿದ್ದ 25ಕ್ಕೂ ಅಧಿಕ ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದಲ್ಲಿ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕುದೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಬರಿಯಿಂದ ಅಳುತ್ತಿದ್ದ ಮಕ್ಕಳನ್ನು ಸ್ಥಳೀಯರು ಸಮಾಧಾನ ಮಾಡಿದ್ದಾರೆ. ಸ್ಥಳಕ್ಕೆ ಕುದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net