ಶಾಲಾ ಬಸ್​- ಕ್ಯಾಂಟರ್​ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು

New Project
Published on

ಬೆಳಗಾವಿ: ಇಂದು ಬೆಳ್ಳಂಬೆಳಗ್ಗೆ ಖಾಸಗಿ ಶಾಲಾ ಬಸ್​ ಮತ್ತು ಕ್ಯಾಂಟರ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಅಥಣಿ ಪಟ್ಟಣ ಹೊರವಲಯದ ಮೀರಜ್ ರಸ್ತೆಯಲ್ಲಿ ಸಂಭವಿಸಿದೆ.

ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದ ಬಸ್​ನಲ್ಲಿ 20 ಮಕ್ಕಳು ಸಂಚರಿಸುತ್ತಿದ್ದರು. ಮಕ್ಕಳನ್ನು ಶಾಲೆಗೆ ಕರೆದೊಯ್ಯುವಾಗ ಬಸ್​ ಮತ್ತು ಕ್ಯಾಂಟರ್​ ನಡುವೆ ಅಪಘಾತ ಸಂಭವಿಸಿದ್ದು, ಎರಡೂ ವಾಹನದ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 10ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅಥಣಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net