ಕೆಸರು ಗದ್ದೆಯಂತಾದ ಶಾಲಾ ಆವರಣ

NVL-RAIN SCHOOL
Published on

ನವಲಗುಂದ: ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯದ ರಸ್ತೆ ಕೆಸರು ಗದ್ದೆಯಂತಾಗಿದ್ದು. ವಿದ್ಯಾರ್ಥಿಗಳು ಶಾಲೆಗೆ ತೆರಳಲು ಹರಸಾಹಸಪಡುವಂತಾಗಿದೆ

ಮಳೆ ಬಂದರೆ ವಸತಿ ನಿಲಯ ಆವರಣದಲ್ಲಿ ನೀರು ಸಂಗ್ರಹಗೊಳ್ಳುತ್ತದೆ. ಆಟದ ಮೈದಾನ ಜಲಾವೃತವಾಗಿ ರಸ್ತೆಗೆ ನೀರು ಬಂದು ಮಕ್ಕಳು ಶಾಲೆಗೆ ತೆರಳಲು ಸಮಸ್ಯೆಯಾಗುತ್ತದೆ.

ತಾಲೂಕಿನಲ್ಲಿ ಕಳೆದ 10 ದಿನಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದ ಸಮಸ್ಯೆ ಉಲ್ಬಣಗೊಂಡಿದೆ. ಮಳೆ ಇದೇ ರೀತಿ ಮುಂದುವರಿದರೆ ಶಾಲೆ ಆವರಣದಲ್ಲಿ ಮತ್ತಷ್ಟು ನೀರು ಸಂಗ್ರಹಗೊಂಡು ವಿದ್ಯಾರ್ಥಿಗಳು ನಡೆದಾಡಲೂ ಸಾಧ್ಯವಾಗದ ಸ್ಥಿತಿ ನಿರ್ವಣವಾಗುತ್ತದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಗರಸು ಮಣ್ಣು ಹಾಕಿ ಮಕ್ಕಳಿಗೆ ಅನುಕೂಲ ಕಲ್ಪಿಸಬೇಕು ಎಂದು ಪಾಲಕರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net