ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ ನಿಧನ

senior artist Lakshmibai enagi i
Published on

ಧಾರವಾಡ: ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ ಅವರು ಧಾರವಾಡದ ರಜತಗಿರಿ ನಿವಾಸದಲ್ಲಿ ಬುಧವಾರ ನಿಧನರಾದರು. ಇವರಿಗೆ 95 ವರ್ಷ ವಯಸ್ಸಾಗಿತ್ತು.

ರಂಗಕರ್ಮಿ ನಾಡೋಜ ಏಣಗಿ ಬಾಳಪ್ಪ ಅವರ ಪತ್ನಿ ಲಕ್ಷ್ಮೀಬಾಯಿ ಅವರು ಹಲವು ನಾಟಕ ಮತ್ತು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಸಿಂಗಾರವ್ವ ಸಿನಿಮಾದಲ್ಲಿ ಇವರು ಅಭಿನಯಿಸಿದ್ದ ತಾಯಿ ಪಾತ್ರ ಗಮನ ಸೆಳೆದಿತ್ತು. ಲಕ್ಷ್ಮೀಬಾಯಿ ಅವರು ಹಿರಿಯ ನಟ ದಿ. ನಟರಾಜ್ ಏಣಗಿ ಅವರ ತಾಯಿ.

ಮಧ್ಯಾಹ್ನ ಹೊಸಯಲ್ಲಾಪುರದ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net