ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ನಿಧನ

surendra shetty
Published on

ಮಂಗಳೂರು: ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ಇಂದು ಮುಂಜಾನೆ ನಿಧನರಾದರು. ಇತ್ತೀಚಿಗೆ ಅನಾರೋಗ್ಯಕ್ಕೀಡಾಗಿದ್ದ ಸುರೇಂದ್ರ ಶೆಟ್ಟಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಮಂಗಳವಾರ ಕೊನೆಯುಸಿರೆಳೆದರು. ಮೃತರಿಗೆ 57 ವರ್ಷ ವಯಸ್ಸಾಗಿತ್ತು.

ಬ್ರಹ್ಮಾವರದ ಆವರ್ಸೆ ಪಡುಮನೆಯಲ್ಲಿ ಜನಿಸಿದ ಸುರೇಂದ್ರ ಶೆಟ್ಟಿ ಅಚ್ಲಾಡಿಯಲ್ಲಿ ಬೆಳೆದಿದ್ದರು. ಮಂಗಳೂರು ವಿಶ್ವವಿದ್ಯಾಲಯದ ಸಮೂಹ‌ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಮುಂಗಾರು, ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯಕರ್ನಾಟಕ, ವಾರ್ತಾ ಭಾರತಿ ಮತ್ತಿತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು. ನಂತರ ಕನ್ನಡಪ್ರಭ ಪತ್ರಿಕೆಯ ಮಂಗಳೂರು ಬ್ಯೂರೋ ಮುಖ್ಯಸ್ಥರಾಗಿದ್ದರು. ಇದನ್ನೂ ಓದಿರಿ ಕರೊನಾ ವ್ಯಾಕ್ಸಿನ್ ಪಡೆಯೋದ್ರಿಂದ ರಾಜ್ಯದಲ್ಲಿ ಹೆಚ್ಚಲಿದ್ಯಾ ‘ರಕ್ತಕ್ಷಾಮ’?

ಮಂಗಳೂರು ವಿವಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಹಳೇ ವಿದ್ಯಾರ್ಥಿಗಳ ಸಂಘದ(MAAM) ಸ್ಥಾಪಕ ಗೌರವಾಧ್ಯಕ್ಷರಾಗಿದ್ದ ಸುರೇಂದ್ರ ಶೆಟ್ಟಿ, ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷರಾಗಿದ್ದರು. ಮೃತರಿಗೆ ಪತ್ನಿ, ಪುತ್ರಿ ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net