ಉಪಮುಖ್ಯಮಂತ್ರಿಗೆ ಹೂಮಳೆಯ ಸ್ವಾಗತ

A shower of flowers for the Deputy Chief Minister
Published on

ಕುಶಾಲನಗರ:

ಮಡಿಕೇರಿ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜಿಲ್ಲೆಗೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕೊಡಗಿನ ಗಡಿಭಾಗ ಕುಶಾಲನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಭಿನ್ನವಾಗಿ ಸ್ವಾಗತಿಸಿದರು. ನಗರದ ಗಣಪತಿ ದೇವಾಲಯದ ಬಳಿ ರಾಷ್ಟ್ರೀಯ ಹೆದ್ದಾರಿಯ 275ರ ಎರಡೂ ಬದಿಯಲ್ಲಿ ಸೇರಿದ್ದ ಕಾರ್ಯಕರ್ತರು ನಾಲ್ಕು ಜೆಸಿಬಿ ಯಂತ್ರಗಳ ಸಹಾಯದಿಂದ ಡಿಕೆಶಿ ಮೇಲೆ ಹೂ ಮಳೆ ರಾಶಿ ಸುರಿಸಿ ಸ್ವಾಗತಿಸಿದರು. ಮತ್ತೊಂದು ಕ್ರೇನ್ ಮೂಲಕ ಬೃಹತ್ ಗುಲಾಬಿ ಹಾರವನ್ನು ಹಾಕಿ ಸಂಭ್ರಮಿಸಿದರು.

ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ
ಈಲ್ಲ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು, ಮಡಿಕೇರಿ ಶಾಸಕ ಡಾ. ಮಂತರ್‌ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಉಚ್ಛನ್ಯಾಯಾಲಯದ ವಕೀಲ ಹೆಚ್.ಎಸ್. ಚಂದ್ರಮೌಳಿ, ಕೆಪಿಸಿಸಿ ಕಾರ್ಯದರ್ಶಿ ಕೆ.ಪಿ. ಚಂದ್ರಕಲಾ, ಕೆ.ಕೆ. ಮಂಜುನಾಥಕುಮಾರ್ ಸೇರಿದಂತೆ ಎಲ್ಲಾ ಹಂತಗಳ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net