ತ್ರಿವಿಧ ದಾಸೋಹಿ ಪುಣ್ಯಸ್ಮರಣೆ: ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ, ಮಠದ ಮಕ್ಕಳಿಗೆ ಊಟ ಬಡಿಸಿದ ಸಿಎಂ ಬೊಮ್ಮಾಯಿ

siddagange
Published on

ತುಮಕೂರು: ಸಿದ್ಧಗಂಗಾ ಮಠದಲ್ಲಿ ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ 3ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಶ್ರೀಗಳ ಗದ್ದುಗೆಯಲ್ಲಿ ಇಂದು ಪ್ರಾತಃಕಾಲದಿಂದಲೇ ರುದ್ರಾಭಿಷೇಕ, ವಿಶೇಷ ಪೂಜೆ ನೆರವೇರಿದವು.

ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಹಾಗೂ ಹರಗುರುಚರಮೂರ್ತಿಗಳು ಶಿವಕುಮಾರ ಶ್ರೀಗಳ ಗದ್ದುಗೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬೆಳಗ್ಗೆ 10 ಗಂಟೆ ಸುಮಾರಿಗೆ ಮಠಕ್ಕೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.

ಸಿದ್ಧಗಂಗಾ ಮಠದ ಮಕ್ಕಳಿಗೆ ಸಿಹಿ ಬಡಿಸಿದ ಸಿಎಂ ಬೊಮ್ಮಾಯಿ
ಸಿದ್ಧಗಂಗಾ ಮಠದ ಮಕ್ಕಳಿಗೆ ಸಿಹಿ ಬಡಿಸಿದ ಸಿಎಂ ಬೊಮ್ಮಾಯಿ

ಶ್ರೀಗಳ ಪುಣ್ಯಸ್ಮರಣೆ ದಿನವನ್ನು ದಾಸೋಹ ದಿನವನ್ನಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಬಾರಿ ಕರೊನಾ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಶ್ರೀಗಳ ಗದ್ದುಗೆಗೆ ಪೂಜೆ ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮ ಆಯೋಜಿಸಿಲ್ಲ. ಉತ್ಸವ, ಮೆರವಣಿಗೆ, ವೇದಿಕೆ ಕಾರ್ಯಕ್ರಮ ಎಲ್ಲವೂ ರದ್ದು ಪಡಿಸಲಾಗಿದೆ. ಭಕ್ತರ ದರ್ಶನಕ್ಕೆ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ವ್ಯವಸ್ಥೆ ಮಾಡಲಾಗಿದೆ. ಪ್ರಸಾದ ವ್ಯವಸ್ಥೆ ದಾಸೋಹದಲ್ಲಿರಲಿದೆ.

3ನೇ ವರ್ಷದ ಪುಣ್ಯಸ್ಮರಣೆಅಂಗವಾಗಿ ಶಿವಕುಮಾರ ಶ್ರೀಗಳ ಗದ್ದುಗೆಯನ್ನು ವಿಶೇಷವಾಗಿ ಅಲಂಕರಿಸಲಾಗಿದೆ.
3ನೇ ವರ್ಷದ ಪುಣ್ಯಸ್ಮರಣೆಅಂಗವಾಗಿ ಶಿವಕುಮಾರ ಶ್ರೀಗಳ ಗದ್ದುಗೆಯನ್ನು ವಿಶೇಷವಾಗಿ ಅಲಂಕರಿಸಲಾಗಿದೆ.

ಸಿದ್ಧಗಂಗಾ ಮಠಕ್ಕೆ ಸಿಎಂ ಭೇಟಿ: ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಮಕ್ಕಳಿಗೆ ಊಟ ಬಡಿಸುವ ಮೂಲಕ ದಾಸೋಹ ದಿನಕ್ಕೆ ಚಾಲನೆ ನೀಡಿದರು. ಸಚಿವರಾದ ಬಿ.ಸಿ ನಾಗೇಶ್, ಮಾಧುಸ್ವಾಮಿ ಸಿಎಂಗೆ ಸಾಥ್​ ಕೊಟ್ಟರು. ಮಕ್ಕಳಿಗೆ ಸಿಎಂ ಪಾಯಸ, ಬೂಂದಿ, ತುಪ್ಪ ಬಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net