

ಮೈಸೂರು: ವರುಣ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಬಾದಾಮಿ, ಕೋಲಾರ... ಈ ಎಲ್ಲ ಕ್ಷೇತ್ರದ ಜನರೂ ನನ್ನನ್ನು ಆಹ್ವಾನಿಸಿದ್ದಾರೆ. ಆದರೆ ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂದು ಇನ್ನೂ ತೀರ್ಮಾನ ಮಾಡಿಲ್ಲ. ಮುಂದಿನ ಚುನಾವಣೆಯೇ ನನಗೆ ಕೊನೇ. ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ ಎಂದರು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಸಿದ್ದರಾಮನಹುಂಡಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಎಲ್ಲಿ ನನಗೆ ರಾಜಕೀಯ ಪುನರ್ಜನ್ಮ ಸಿಕ್ತೋ ಅಲ್ಲಿಯೇ ನನ್ನನ್ನು ಸೋಲಿಸಿದ್ರು. ಹಾಗಂತ ಬೇಸರ ಮಾಡಿಕೊಳ್ಳೋಕೆ ಆಗಲ್ಲ. ಬರೋಬ್ಬರಿ ಐದು ಬಾರಿ ಚಾಮುಂಡೇಶ್ವರಿ ಜನ ನನ್ನನ್ನು ಗೆಲ್ಲಿಸಿದ್ದಾರೆ. ಅದಕ್ಕಾಗಿ ಚಾಮುಂಡೇಶ್ವರಿ ಕ್ಷೇತ್ರವನ್ನು ನಾನು ಎಂದಿಗೂ ಮರೆಯಲ್ಲ. ಮುಂದಿನ ಚುನಾವಣೆಯೇ ಕೊನೇ. ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ. ಹೀಗಾಗಿ ಹಲವು ಕ್ಷೇತ್ರಗಳ ಜನರು ನನ್ನನ್ನು ತಮ್ಮ ಕ್ಷೇತ್ರದಿಂದಲೇ ಸ್ಪರ್ಧೆಗೆ ಆಹ್ವಾನಿಸಿದ್ದಾರೆ. ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಮುಂದೆ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.