ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಅನುಷ್ಠಾನಕ್ಕೆ ತರಲಿ: ಸಿದ್ದರಾಮಯ್ಯ ಒತ್ತಾಯ

Siddaramaiah
Published on

ಬೆಂಗಳೂರು: ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯನ್ನು (ಎಸ್‌ಸಿಪಿ, ಟಿಎಸ್‌ಪಿ) ರಾಷ್ಟ್ರ ಮಟ್ಟದಲ್ಲಿ ಅನುಷ್ಠಾನಕ್ಕೆ ತರಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಜಂಟಿ ವೇದಿಕೆ ಲಿಡ್ಕರ್ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ‘ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆ ಕಡ್ಡಾಯ ಅನುಷ್ಠಾನ-ಒಂದು ಚರ್ಚೆ’ ಸಂವಾದದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಈಗಾಗಲೇ ಕಾಯ್ದೆ ಜಾರಿಯಲ್ಲಿದೆ. ಕೇಂದ್ರ ಸರ್ಕಾರ ಈ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೊಳಿಸಿ ಅನುದಾನ ಒದಗಿಸಬೇಕು. ನಮ್ಮ ಸರ್ಕಾರ ಬಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟಿರುವ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಸಲಾಗುತ್ತಿರುವ ಕಾಯ್ದೆಯಲ್ಲಿರುವ ‘7ಡಿ’ ಸೆಕ್ಷನ್ ಅನ್ನು ರದ್ದು ಪಡಿಸಲಾಗುವುದು ಎಂದರು.

ನಾನು ಸಿಎಂ ಆಗಿದ್ದಾಗ ಮಂಡಿಸಿದ್ದ ಬಜೆಟ್ ಗಾತ್ರವೂ 2 ಲಕ್ಷ 2 ಸಾವಿರ ಕೋಟಿ ರೂ. ಇತ್ತು. ಆಗ ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆಗೆ 29 ಸಾವಿರ ಕೋಟಿ ರೂ.ಮೀಸಲಿಟ್ಟಿದ್ದೆ. ಈಗ ಬಜೆಟ್ ಗಾತ್ರ 2ಲಕ್ಷ 47 ಸಾವಿರ ಕೋಟಿ ರೂ. ಇದೆ. ಆದರೆ, ಈಗಿನ ಸರ್ಕಾರ 207 ಕೋಟಿ ರೂ. ಇಟ್ಟಿದೆ. ಬಿಜೆಪಿ ಪಕ್ಷ ಪರಿಶಿಷ್ಟರ ಕಲ್ಯಾಣ ಪರವಾಗಿ ಇಲ್ಲ ಎಂಬುದಕ್ಕೆ ಇದೇ ಸಾಕ್ಷಿ. ಬಿಜೆಪಿ ಸರ್ಕಾರ ಬರೀ ಕಾರ್ಪೋರೇಟ್ ಕಂಪನಿಗಳ ಪರವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಅಂತಾರೆ. ‘ಕಹಾ ಹೈ ಮೋದಿ, ಸಬ್ ಕಾ ಸಾಥ್ ಸಬ್ ಕಾ ವಿನಾಶ್’ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net