

ಮದ್ದೂರು: ಪಟ್ಟಣದ ಎಚ್.ಕೆ.ವೀರಣ್ಣಗೌಡ ಪದವಿ ಕಾಲೇಜಿನಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನವನ್ನು ಗುರುವಾರ ಸರಳವಾಗಿ ಆಚರಿಸಲಾಯಿತು.
ಎಂ.ಎಚ್.ಚೆನ್ನೇಗೌಡ ವಿದ್ಯಾಲಯದ ಕಾರ್ಯದರ್ಶಿ ಸಿ.ಅಪೂರ್ವಚಂದ್ರ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಮತ್ತು ಸಾಧನೆಗಳು ಎಂದೆಂದಿಗೂ ಪ್ರಸ್ತುತವಾಗಿವೆ. ಕಲೆ, ಸಾಹಿತ್ಯ, ಸಂಸ್ಕೃತಿ, ಶಿಕ್ಷಣ, ರಾಜಕೀಯ, ಕೃಷಿ, ಕೈಗಾರಿಕೆ, ನಗರಾಭಿವೃದ್ಧಿ ಹೀಗೆ ಹತ್ತು ಹಲವು ಅಭಿವೃದ್ಧಿಗಳ ಕುರಿತು ಸಂಕ್ಷಿಪ್ತವಾಗಿ ಮಾಹಿತಿಯನ್ನು ನೀಡಿದರು.
ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುರೇಂದ್ರ ಹಾಗೂ ಆರ್.ಪಿ.ಚಂದನ್, ಎ.ವಿ.ಪ್ರದೀಪ್, ಡಾ. ಸಂದೀಪ್, ಸ್ಮಿತಾ ಇದ್ದರು.