ಉದ್ಯಮಿ ಇದ್ದ ಬೈಕ್​ಗೆ ಕಾರು ಡಿಕ್ಕಿ, ಕೆಳಗೆ ಬಿದ್ದವನನ್ನ ನಡುರಸ್ತೆಯಲ್ಲೇ ಕೊಚ್ಚಿ ಕೊಂದ ದುಷ್ಕರ್ಮಿಗಳು

web
Published on

ಬೆಳ್ತಂಗಡಿ: ರಿಯಲ್ ಎಸ್ಟೇಟ್ ಹಾಗೂ ಫ್ಲೈವುಡ್ ವ್ಯವಹಾರ ನಡೆಸುತ್ತಿದ್ದ ಉದ್ಯಮಿಯನ್ನುಶಿರಸಿ ಬಳಿ ಅಪಘಾತ ಮಾಡಿ ಬಳಿಕ ತಲ್ವಾರ್​ನಿಂದ ಒಡೆದು ಕೊಲೆ ಮಾಡಲಾಗಿದೆ. 

ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ತೋಟತ್ತಾಡಿ ಸನಿಹದ ಬೆಂದ್ರಾಳ ನಿವಾಸಿ ಸುದರ್ಶನ್ ಅಲಿಯಾಸ್ ಹರ್ಷ(36) ಕೊಲೆಯಾದವರು. ಶಿರಸಿ ಮುಂಡಗೋಡ ತಾಲೂಕಿನ ಬಡ್ಡಿಗೇರಿ ಎಂಬಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಈ ಕೃತ್ಯ ಎಸಗಿ ಪರಾರಿಯಾಗಿದೆ.

ಬೈಕ್​ನಲ್ಲಿ ಹರ್ಷ  ಪ್ರಯಾಣಿಸುತ್ತಿದ್ದ ವೇಳೆ ಅವರಿದ್ದ ಬೈಕ್‌ಗೆ ಕಾರಿನಲ್ಲಿ ಬಂದ ತಂಡ ಕಾರಿನಿಂದ ಡಿಕ್ಕಿ ಹೊಡೆಸಿ ರಸ್ತೆಗೆ ಬೀಳಿಸಿದೆ. ಬಳಿಕ ಮಚ್ಚಿನಿಂದ ಕೊಚ್ಚಿ ಅವರನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮುಂಡಗೋಡ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net