

ಬೆಳಗಾವಿ: ರಜೆಯ ಮೇಲೆ ಆಗಮಿಸಿದ್ದ ಬಿಎಸ್ಎ್ ಯೋಧ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಟನೆ ಇಲ್ಲಿನ ವಿಜಯನಗರದಲ್ಲಿ ಬುಧವಾರ ನಡೆದಿದೆ. ಮೂಲತ ಕಾಗವಾಡ ತಾಲೂಕಿನ ಶೇಡಬಾಳ ಸ್ಟೇಷನ್ ಗ್ರಾಮದ 45 ವರ್ಷದ ಬಿಎಸ್ಎ್ ಹವಾಲ್ದಾರ ದಗಡು ಮಹಾದೇವ ಪೂಜಾರಿ ಆತ್ಮಹತ್ಯೆ ಮಾಡಿಕೊಂಡವರು. ಪ್ರಸ್ತುತ ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿ 170ನೇ ಬಟಾಲಿಯನ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆರೋಗ್ಯ ಸಮಸ್ಯೆಯಿಂದ ಬೆಳಗಾವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಾಗಿ ತಿಳಿದು ಬಂದಿದೆ. ನಗರದ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಸುತ್ತಿರುವುದಾಗಿ ನಗರ ಪೊಲೀಸ್ ಆಯುಕ್ತ ಭೂಷನ್ ಬೋರಸೆ ತಿಳಿಸಿದ್ದಾರೆ.