ಸುಧಾಕರ್ ರಾಜೀನಾಮೆಗೆ ಆಗ್ರಹಿಸಿ ಏಕಾಂಗಿ ಪ್ರತಿಭಟನೆ

protest
ಸಚಿವ ಡಿ.ಸುಧಾಕರ್ ವಿರುದ್ಧ ಗಣೇಶ್ ಏಕಾಂಗಿ ಪ್ರತಿಭಟನೆ ನಡೆಸಿದರು.
Published on

ಶಿವಮೊಗ್ಗ: ಬ್ರಾಹ್ಮಣರ ಬಗ್ಗೆ ಸಚಿವ ಡಿ.ಸುಧಾಕರ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಬ್ರಾಹ್ಮಣ ಜಾತಿ ನಿಂದನೆ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಜಿಲ್ಲಾ ಸ್ಮಾರ್ಥ ಬ್ರಾಹ್ಮಣರ ಸಂಘದ ಪರವಾಗಿ ಗಣೇಶ್ ಎಂಬುವವರು ಏಕಾಂಗಿಯಾಗಿ ಬುಧವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಪದ ಬಳಸಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಕೂಡಲೆ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ರಾಜಕೀಯ ನಿವೃತ್ತಿ ಘೋಷಿಸಬೇಕು ಎಂದು ಒತ್ತಾಯಿಸಿದರು.
ಬ್ರಾಹ್ಮಣರ ಬಗ್ಗೆ ಜಾತಿ ನಿಂದನೆಯ ಮೂಲಕ ಅವಮಾನ ಮಾಡಿರುವ ಸಚಿವರ ವಿರುದ್ಧ ಜಿಲ್ಲಾ ರಕ್ಷಣಾಧಿಕಾರಿಗಳು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಜಾತಿ ನಿಂದನೆ ಆಧಾರದ ಮೇಲೆ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net