

ಚಾಮರಾಜನಗರ: ಹಿಟ್ ಅಂಡ್ ರನ್ ಪ್ರಕರಣದಲ್ಲಿ ಪರಿಹಾರ ಕೊಡಿಸುವಂತೆ ಆಗ್ರಹಿಸಿ ಕೊಳ್ಳೇಗಾಲದ ಕೆ.ರಾಜು ಎಂಬುವವರು ಸೋಮವಾರ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಭವನದ ಮುಂಭಾಗ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಹಿಡಿದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾನಿರತ ಕೆ.ರಾಜು ಮಾತನಾಡಿ, ಸುಮಾರು 4 ವರ್ಷಗಳ ಹಿಂದೆ ಹಿಟ್ ಅಂಡ್ ರನ್ ಕೇಸ್ ದಾಖಲಾಗಿತ್ತು. ಇಲ್ಲಿವರೆಗೂ ಜಿಲ್ಲಾಧಿಕಾರಿ ಕಚೇರಿಗೆ ಪರಿಹಾರ ಕೊಡುವಂತೆ ಅಲೆದು ಸಾಕಾಗಿದೆ. ಅಪಘಾತ ಮಾಡಿ ಹೋದವರನ್ನು ಬಂಧಿಸಿಲ್ಲ, ಇತ್ತ ಪರಿಹಾರವನ್ನೂ ನೀಡುತ್ತಿಲ್ಲ. ಹಾಗಾಗಿ ನನಗೆ ನ್ಯಾಯ ದೊರೆಯುವವರೆಗೂ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಏಕಾಂಗಿಯಾಗಿ ಅಹೋರಾತ್ರಿ ಪ್ರತಿಭಟನೆ ಮಾಡುತ್ತೇನೆ ಎಂದು ತಿಳಿಸಿದರು.