

ಮೈಸೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರು ನಡೆಸಿದ ದಾಳಿ ಖಂಡಿಸಿ ವಿಜಯನಗರ ನಿವಾಸಿ ಕಾರ್ತಿಕ್ ಏಕಾಂಗಿ ಪ್ರತಿಭಟನೆ ನಡೆಸಿದರು. ನಗರದ ನ್ಯಾಯಾಲಯದ ಮುಂಭಾಗವಿರುವ ಗಾಂಧಿ ಪುತ್ಥಳಿ ಬಳಿ ಭಾರತದಲ್ಲಿ ಭಾರತೀಯರಿಗೆ ರಕ್ಷಣೆ ಎಲ್ಲಿ ಎಂಬ ಪ್ಲೇಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದರು.
ಜನರು ಇಂದು ಐಪಿಎಲ್ ಕ್ರಿಕೆಟ್ ಮ್ಯಾಚ್ ನೋಡಿಕೊಂಡು ಸುಮ್ಮನಿದ್ದಾರೆ. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ಒಟ್ಟಾಗಿ ಒಗ್ಗಟಿನಿಂದ ಪ್ರತಿಭಟಿಸಬೇಕು. ಈ ಹಿನ್ನೆಲೆಯಲ್ಲಿ ಜಾಗೃತಿ ಮೂಡಿಸಲು ಈ ರೀತಿ ಏಕಾಂಗಿ ಪ್ರತಿಭಟನೆ ಮಾಡುತ್ತಿದ್ದೇನೆ ಎಂದು ಪ್ರತಿಕ್ರಿಯಿಸಿದರು.
ಕಾಶ್ಮೀರದಲ್ಲಿ ಈಗ, ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿಯೂ ಈ ರೀತಿ ಘಟನೆಯಾಗದಂತೆ ನಾವು ಎಲ್ಲರೂ ಒಗ್ಗಟಿನಿಂದ ಇರಬೇಕು. ಕಾಶ್ಮೀರದಲ್ಲಿ ಈ ರೀತಿ ಕೃತ್ಯ ನಡೆಯಲು ಸ್ಥಳೀಯ ಸಹಕಾರವಿದೆ ಎಂಬುದು ಕಾಣುತ್ತಿದೆ. ಕಾಶ್ಮೀರದ ಪ್ರವಾಸೋದ್ಯಕ್ಕೆ ಹೆಚ್ಚು ಅನುದಾನ ನೀಡಲಾಗುತ್ತಿದೆ. ಭದ್ರತೆಗೆ ಏಕೆ ಒತ್ತು ನೀಡಿಲ್ಲ. ಅದನ್ನು ಸರ್ಕಾರ ಮಾಡಬೇಕು. ಕೇಂದ್ರ ಸರ್ಕಾರ ಈಗಾಗಲೇ ಪಾಕಿಸ್ತಾನದ ವಿರುದ್ಧ ತೆಗೆದುಕೊಂಡಿರುವ ನಿರ್ಧಾರ ಉತ್ತಮವಾಗಿದೆ. ಅವುಗಳನ್ನು ಕಾಯಂ ಬಂದ್ ಮಾಡಿ ಎಂದು ಆಗ್ರಹಿಸಿದರು.