ಶರಣರ ಚಿಂತನ ಮಾಲಿಕೆ ವಿಶೇಷ ಉಪನ್ಯಾಸ

Published on

ಮುಂಡರಗಿ: ಪಟ್ಟಣದ ಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಕಸಾಪ, ಶಸಾಪ ಹಾಗೂ ಚೈತನ್ಯ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಜ. 6ರಂದು ಸಂಜೆ 6ಗಂಟೆಗೆ ಶರಣರ ಚಿಂತನ ಮಾಲಿಕೆ ವಿಶೇಷ ಉಪನ್ಯಾಸ ಜರುಗಲಿದೆ. ಹಿರಿಯ ವೈದ್ಯ ಡಾ. ಅನ್ನದಾನಿ ಮೇಟಿ ಉದ್ಘಾಟಿಸುವರು. ಚೈತನ್ಯ ಶಿಕ್ಷಣ ಸಂಸ್ಥೆ ನಿರ್ದೇಶಕಿ ವೀಣಾ ಪಾಟೀಲ ಅಧ್ಯಕ್ಷತೆ ವಹಿಸುವರು. ನಿವೃತ್ತ ಪ್ರಾಚಾರ್ಯ ಪ್ರೊ. ಎಂ.ಎಸ್. ಹೊಟ್ಟಿನ ಉಪನ್ಯಾಸ ನೀಡುವರು. ಪ್ರೊ. ಆರ್.ಎಲ್. ಪೊಲೀಸಪಾಟೀಲ, ಪ್ರೊ. ಎಂ.ಜಿ. ಗಚ್ಚಣ್ಣವರ ಉಪಸ್ಥಿತಿ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net