ವಿಶೇಷ ವ್ಯಕ್ತಿ ವಿಪಕ್ಷ ನಾಯಕ ಆಗುತ್ತಾರೆ, ನಿರಾಣಿ ಪ್ರತಿಕ್ರಿಯೆ

IMG-20230708-WA0005.jpg
Published on

ಬೆಳಗಾವಿ: ವಿರೋಧ ಪಕ್ಷದ ನಾಯಕನನ್ನಾಗಿ ವಿಶೇಷ ವ್ಯಕ್ತಿಯನ್ನು ಆಯ್ಕೆ ಮಾಡುವ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಹೀಗಾಗಿ ಕಾದು ನೋಡಿ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.
ವಿಪಕ್ಷ ನಾಯಕನಾಗಲು ಯತ್ನಾಳ ಹೆಸರು ಕೇಳಿ ಬರುತ್ತಿದೆ ಎಂಬ ಪ್ರಶ್ನೆಗೆ, ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಯಿಸಿದ ಅವರು, ಯಾರಿಗೆ ಕೊಟ್ಟರೂ ಅವರು ನಮ್ಮ ಪಕ್ಷದವರೇ. ನಮ್ಮ ಪಕ್ಷದ ವರಿಷ್ಠರು ಯತ್ನಾಳ್ ಸೇರಿ ಯಾರನ್ನೇ ವಿಪಕ್ಷ ನಾಯಕನಾಗಿ ಘೋಷಣೆ ಮಾಡಿದರೂ ಅದನ್ನು ಸ್ವಾಗತ ಮಾಡುತ್ತೇನೆ ಎಂದರು.
ನಾನು ರಾಜ್ಯಾಧ್ಯಕ್ಷ ಆಗುವುದಿಲ್ಲ. ಪಕ್ಷದ ಸಂಘಟನೆಯಲ್ಲಿ ನಾನಿರುತ್ತೇನೆ. ರಾಜ್ಯಾಧ್ಯಕ್ಷನಾಗಿಯೇ ಪಕ್ಷ ಸಂಘಟನೆ ಮಾಡಬೇಕು ಅಂತಾ ಏನೂ ಇಲ್ಲ.  ಬೆಳಗಾವಿ ವಿಭಾಗದಲ್ಲಿ ಯಾವುದೇ ಹುದ್ದೆ ತೆದುಕೊಳ್ಳದೆ ಪಕ್ಷ ಸಂಘಟಿಸುತ್ತೇವೆ ಎಂದರು.
ನನಗೆ ರಾಜ್ಯ ರಾಜಕಾರಣದಲ್ಲಿ ನನಗೆ ಆಸಕ್ತಿ ಇದೆ. ರಾಜ್ಯ, ರಾಷ್ಟ್ರ ನಾಯಕರು ಎನು ತೀರ್ಮಾನ ಮಾಡಿದರೂ ಅದಕ್ಕೆ ಬದ್ಧ.  ನನಗೆ ವೈಯಕ್ತಿಕವಾಗಿ ಮತ್ತೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಆಸಕ್ತಿ ಇದೆ. ಎಲ್ಲಿ ಕಳೆದುಕೊಂಡಿದ್ದೇನೆ, ಅಲ್ಲೆ ಹುಡುಕುವ ಸ್ವಭಾವ ನನ್ನದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.  ನನ್ನ ಸೋಲಿಗೆ ನಾನೇ ಕಾರಣ, ನನ್ನ ಅತೀಯಾದ ಆತ್ಮವಿಶ್ವಾಸದಿಂದ ನನಗೆ ಸೋಲಾಗಿದೆ ಎಂದರು. ಸಿದ್ದರಾಮಯ್ಯ ಅವರ ಬಜೆಟ್ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ. ಒಳ್ಳೆಯ ಬಜೆಟ್ ನಿರೀಕ್ಷೆ ಹುಸಿಯಾಗಿದೆ. ಬಾಗಲಕೋಟೆ, ವಿಜಯಪುರ ಕೃಷ್ಣ ಮೇಲ್ದಂಡೆ ಅನುಷ್ಠಾನ ವಿಚಾರದಲ್ಲಿ ಮುಳುಗಡೆಯಾದ ಜನರಿಗೆ ಪರಿಹಾರ ಕೊಡಲು 5 ಸಾವಿರ ಕೋಟಿ ನಾವು ಮೀಸಲು ಇಟ್ಟಿದ್ದೇವು. ಸಾಂಕೇತಿಕವಾಗಿ 10 ಜನರಿಗೆ ಪರಿಹಾರ ವಿತರಣೆ ಕೂಡ ಮಾಡಿದ್ದೇವು. ಆದರೆ ಇವರು ಈ ಬಜೆಟ್ ನಲ್ಲಿ ಕೈ ಬಿಟ್ಟಿದ್ದಾರೆ. ಎಲ್ಲ ರಂಗದಲ್ಲಿಯೂ ಸಹ ಸುಳ್ಳು ಭರವಸೆ ನೀಡಿದ್ದಾರೆ ಎಂದು ಆರೋಪಿಸಿದರು.
ಬೊಮ್ಮಾಯಿ, ಯಡಿಯೂರಪ್ಪ ಮಾಡಿದ 20ಕ್ಕೂ ಹೆಚ್ಚು ಯೋಜನೆಗಳನ್ನು ಕೈಬಿಡುವ ಮೂಲಕ ರಾಜ್ಯದ ಜನರಿಗೆ ಮೋಸ ಮಾಡಿದ್ದಾರೆ. ಒಂದೇ ಸಮುದಾಯದ ಓಲೈಕೆಯ ಬಜೆಟ್ ಇದಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net