ವಿಶೇಷ ಯೋಜನೆ ಭರವಸೆ ಇದೆ

narayana gowda
Published on

ಮೈಸೂರು: ಮೈಸೂರು ಭಾಗದ ಪ್ರವಾಸೋದ್ಯಮದ ಅಭಿವೃದ್ಧಿಗೆ ನಾನಾ ಯೋಜನೆ ನೀಡಬೇಕು ಎಂದು ಮೈಸೂರು ಹೋಟೆಲ್ ಮಾಲೀಕರ ಸಂಘ ಅಧ್ಯಕ್ಷ ನಾರಾಯಣ ಗೌಡ ಒತ್ತಾಯಿಸಿದ್ದಾರೆ.

ವಿಶೇಷ ಅನುದಾನ ಘೋಷಣೆ ಮಾಡುವ ಮೂಲಕ ‘ಪ್ರವಾಸೋದ್ಯಮ ಸರ್ಕ್ಯೂಟ್’ ರಚನೆ ಮಾಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದೇವೆ. ಈ ಬಾರಿಯ ಬಜೆಟ್‌ನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಯೋಜನೆ ನೀಡುವ ಭರವಸೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net