ಲಕ್ಷ್ಮಣೇಶ್ವರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯ

JANUA., 3, HNP., Ph.2.
Published on

ಹೊಳೆನರಸೀಪುರ: ಪಟ್ಟಣದ ಶ್ರೀ ಲಕ್ಷ್ಮಣೇಶ್ವರಸ್ವಾಮಿ ದೇವಾಲಯದಲ್ಲಿ ಮಂಡಲಪೂಜೆ ಪ್ರಯುಕ್ತ ಶುಕ್ರವಾರ ವಿಶೇಷ ಪೂಜಾ ಕೈಂಕರ್ಯ ನೆರವೇರಿತು.

ಮುಂಜಾನೆಯಿಂದಲೇ ಪ್ರಾರ್ಥನೆ, ಗಣಪತಿ ಪೂಜೆ, ಪಂಚಗವ್ಯ ಪುಣ್ಯಹವಾಚನೆ, ತತ್ಸಬಂಧ ಕಲಾಹೋಮ, ತತ್ತ್ವಹೋಮ, ಪ್ರಧಾನ ಹೋಮ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಕಲಶಪೂಜೆ, ಕಲಶಾಭಿಷೇಕ, ಮಹಾಮಂಗಳರತಿ ನೆರವೇರಿತು. ಬಳಿಕ ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.

ಪೂಜಾ ಕಾರ್ಯದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯೆ ಭವಾನಿ ರೇವಣ್ಣ, ಪುರಸಭೆ ಮಾಜಿ ಅಧ್ಯಕ್ಷರಾದ ಎಚ್.ವಿ.ಪುಟ್ಟರಾಜು, ಕೆ.ಆರ್.ಸುಬ್ರಮಣ್ಯ, ಎಚ್.ಎಸ್.ಸುದರ್ಶನ್, ಪುರಸಭಾ ಸದಸ್ಯರಾದ ಕೆ.ಶ್ರೀಧರ್, ಎ.ಜಗನ್ನಾಥ್, ಎನ್.ಜ್ಯೋತಿ, ನಾಗಮಣಿ, ಜೆ.ತ್ರಿಲೋಚನಾ ಹಾಗೂ ಮಧು, ವೈ.ವಿ.ಚಂದೆಶೇಖರ್ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net