ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ಅನಾರೋಗ್ಯ: ಸೆ.2ರಂದು ನಗರದಲ್ಲಿ ವಿಶೇಷ ಪೂಜೆ ಸಲ್ಲಿಕೆ

1
Published on

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರವೇ ಗುಣಮುಖರಾಗಲೆಂದು ನಗರದ ರೈಲ್ವೆ ನಿಲ್ದಾಣ ಸಮೀಪದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸೆ.2ರಂದು ಬೆಳಗ್ಗೆ 10ಗಂಟೆಗೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ ಎಂದು ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬೆಳಗ್ಗೆ 10.30ಕ್ಕೆ ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಿಂದ ಜಿಲ್ಲಾಧಿಕಾರಿ ಕಚೇರಿವರಿಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಪ್ರತಿಭಟನೆಯಲ್ಲಿ ಪಕ್ಷದ ಹಾಲಿ ಮತ್ತು ಮಾಜಿ ಶಾಸಕರು, ಮುಖಂಡರು ಭಾಗವಹಿಸುತ್ತಿರುವುದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net