ಆಯುಧ ಪೂಜೆ ಅಂಗವಾಗಿ ವಿಶೇಷ ಕಾರ್ಯಕ್ರಮ

Published on

ಸೋಮವಾರಪೇಟೆ: ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದಿಂದ ಅ. 11ರಂದು ಆಯುಧ ಪೂಜೆ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಸಂಘದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ತಿಳಿಸಿದರು.

11 ರಂದು ಬೆಳಗ್ಗೆ 7 ಗಂಟೆಗೆ ಸಂಘದ ಕಚೇರಿಯಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ನಂತರ ಪಟ್ಟಣ ಎಲ್ಲ ಪ್ರತಿಮೆಗಳಿಗೆ ಮಾಲಾರ್ಪಣೆ, 8.30ಕ್ಕೆ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಖಾಸಗಿ ಬಸ್ ನಿಲ್ದಾಣದಲ್ಲಿ ಆಯೋಜಿಸಿರುವ ವೇದಿಕೆ ಕಾರ್ಯಕ್ರಮವನ್ನು ಸಂಸದ ಯುದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಶಾಸಕ ಅಪ್ಪಚ್ಚು ರಂಜನ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಪ್ರಮುಖರಾದ ಕೆ.ಪಿ. ಚಂದ್ರಕಲಾ, ಎಸ್.ಜಿ. ಮೇದಪ್ಪ, ಆಯಾತಾನ್ ರೆಸಾರ್ಟ್‌ನ ಟೋನಿ ವಿನ್ಸೆಂಟ್, ಪ್ರಮುಖರಾದ ಬಿ.ಜೆ. ದೀಪಕ್, ಕೆ.ಎಂ. ಲೋಕೇಶ್, ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆ ನಡೆಯಲಿದ್ದು, ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನದಾನ, ಸಂಜೆ 4.30ಕ್ಕೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದರು.

6 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಶಾಸಕ ಡಾ.ಮಂತರ್‌ಗೌಡ, ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್‌ಗೌಡ, ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ, ಮೈಸೂರಿನ ಗೋಪಾಲಗೌಡ ಆಸ್ಪತ್ರೆಯ ಡಾ. ಶುಶ್ರುತ್ ಗೌಡ, ಉದ್ಯಮಿಗಳಾದ ಜಯರಾಮ್, ಸತೀಶ್, ಮಿಥುನ್ ಹಾನಗಲ್ಲು ಮತ್ತಿತರರು ಪಾಲ್ಗೊಳ್ಳಲಿದ್ದಾರೆ. 8 ಗಂಟೆಗೆ ಬೆಂಗಳೂರಿನ ರಿಶು ಪುರುಷೋತ್ತಮ್ ತಂಡದವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಸಂಘದ ಹಿರಿಯ ಸದಸ್ಯರಾದ ವಿದ್ಯಾ ನರ್ಸಿಂಗ್ ಇನ್‌ಸ್ಟಿಟ್ಯೂಟ್‌ನ ಕೆ.ಇ. ಸುಲೈಮಾನ್, ಸ್ವಾಮಿ ಟ್ರಾವೆಲ್ಸ್‌ನ ರಾಮಚಂದ್ರ, ಸೆಸ್ಕ್‌ನ ಲೈನ್‌ಮೆನ್ ಸದಾಶಿವ ಜಾದವ್, ರಾಷ್ಟ್ರೀಯ ಜೂನಿಯರ್ ಹಾಕಿ ತಂಡದ ತರಬೇತುದಾರ ಜನಾರ್ಧನ್ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಬಿ.ಎನ್. ರಂಗಸ್ವಾಮಿ, ಕಾರ್ಯದರ್ಶಿ ಮಣಿ ಕುಶಾಲಪ್ಪ, ಸಹ ಕಾರ್ಯದರ್ಶಿ ಎಂ.ಎಂ. ಕಿರಣ್, ಖಜಾಂಚಿ ಡೋಮಿನಿಕ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net