ಮಕ್ಕಳಿಗೆ ಪರೀಕ್ಷೆ ಭಯ ಹೋಗಲಾಡಿಸಲು ವಿಶೇಷ ಕಾರ್ಯಕ್ರಮ

20 yelandur 03
ಯಳಂದೂರಿನ ಬಿಆರ್‌ಸಿ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ್ದ ಅಂಗವಿಕಲ ಮಕ್ಕಳಿಗೆ ಶೈಕ್ಷಣಿಕ ಮೌಲ್ಯಮಾಪನ ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಆರ್.ನಂಜುಂಡಯ್ಯ ಮಾತನಾಡಿದರು, ಬಿಇಒ ಮಾರಯ್ಯ, ರಘು ಸೇರಿದಂತೆ ಇತರರು ಹಾಜರಿದ್ದರು.
Published on

ಯಳಂದೂರು: ತಾಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಅಂಗವಿಕಲ ಮಕ್ಕಳಿಗೆ ಪರೀಕ್ಷೆ ಭಯ ಹೋಗಲಾಡಿಸಿ, ಹೆಚ್ಚು ಅಂಕ ಗಳಿಸುವ ನಿಟ್ಟಿನಲ್ಲಿ ಇವರನ್ನು ವಿಶೇಷವಾಗಿ ಸಿದ್ಧಗೊಳಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಆರ್. ನಂಜುಂಡಯ್ಯ ತಿಳಿಸಿದರು.

ಅವರು ಪಟ್ಟಣದ ಬಿಆರ್‌ಸಿ ಕೇಂದ್ರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಂಗವಿಕಲ ಮಕ್ಕಳಿಗೆ ಹಮ್ಮಿಕೊಂಡಿದ್ದ ಶೈಕ್ಷಣಿಕ ಮೌಲ್ಯಮಾಪನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಅಂಗವಿಕಲ ಮಕ್ಕಳಿಗೆ ಪರೀಕ್ಷೆ ಭಯವನ್ನು ಹೋಗಲಾಡಿಸುವ ಬಗ್ಗೆ ಗಮನ ನೀಡಿ, ಹೆಚ್ಚು ಅಂಕಗಳನ್ನು ಪಡೆಯಲು ಸಹಾಯವಾಗುವ ನಿಟ್ಟಿನಲ್ಲಿ ಬರೆಯುವ ಕೌಶಲ, ಓದುವುದು, ಗ್ರಹಿಕೆ ಸೇರಿದಂತೆ ವಿಷಯವಾರು ಅಂಶಗಳ ಬಗ್ಗೆ ವಿಶೇಷ ಒತ್ತನ್ನು ನೀಡಿ ಶೈಕಣಿಕ ಮಟ್ಟವನ್ನು ಸುಧಾರಣೆ ಮಾಡಿ ಹೆಚ್ಚು ಅಂಕ ಗಳಿಸಲು ತರಬೇತುಗೊಳಿಸಲಾಗುತ್ತಿದೆ. ತಾಲೂಕಿನಲ್ಲಿ 16 ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಿದ್ದು, ಇವರಿಗೆ ಮಾನಸಿಕ ಧೈರ್ಯ ತುಂಬುವ ಕೆಲಸವನ್ನು ಮಾಡಲಾಗುತ್ತದೆ ಎಂದು ತಿಳಿಸಿದರು.

ಬಿಇಒ ಮಾರಯ್ಯ ಮಾತನಾಡಿ, ಅಂಗವಿಕಲ ಮಕ್ಕಳಿಗೆ ಸರ್ಕಾರವು ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದ್ದು, ಸಾರಿಗೆ, ಭತ್ಯೆ, ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ಸೇರಿದಂತೆ ಸಾಕಷ್ಟು ಸೌಕರ್ಯಗಳನ್ನು ನೀಡುತ್ತಿದ್ದು, ಇದನ್ನು ಬಳಸಿಕೊಂಡು ಶಿಕ್ಷಣದಲ್ಲಿ ಓದಿ ಸಾಧಿಸಬೇಕು ಎಂಬ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.

ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ವೀರಭದ್ರಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೈ.ಎಂ.ಮಂಜುನಾಥ್, ಇಸಿಒ ಕುಮಾರ್, ಶಿಕ್ಷಕರಾದ ಸೋಮಣ್ಣ, ಪ್ರಮೋದ್, ಕೆ.ಎಂ.ಮಧು, ರಂಜಿತಾ, ಲೀಲಾವತಿ ಸೇರಿದಂತೆ ಅನೇಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net