ಧರ್ಮಸ್ಥಳದಲ್ಲಿ ಇಂದಿನಿಂದ ಲಕ್ಷದಿಪೋತ್ಸವ: ಭಕ್ತರಿಂದ ಶ್ರೀ ಮಂಜುನಾಥ ಸ್ವಾಮಿ ನಾಮಸ್ಮರಣೆ

dharmasthala
Published on

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದಿಪೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಾವಿರಾರು ಭಕ್ತರು ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಆಗಮಿಸುತ್ತಿದ್ದಾರೆ.

ಕಾರ್ತಿಕ ಮಾಸ ಕೃಷ್ಣ ಪಕ್ಷದ ಏಕಾಶಿಯಿಂದ ಅಂದರೆ ನ.29ರಿಂದ ಡಿ.3ರವರೆಗೆ ಲಕ್ಷದಿಪೋತ್ಸವ ನಡೆಯಲಿದ್ದು, ಸಕಲ ಸಿದ್ಧತೆ ಆಗಿದೆ. ಇಂದು (ನ.29) ವಸಂತಕಟ್ಟೆ ಉತ್ಸವ ನಡೆಯಲಿದೆ. ಲಕ್ಷ ದೀಪೋತ್ಸವ ಪ್ರಯುಕ್ತ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ನಡೆಯಲಿದೆ.

ನ. 29ರಂದು ಉತ್ಸವ, ಡಿ.1ರಂದು ಲಲಿತೋದ್ಯಾನ ಉತ್ಸವ, 2ರಂದು ಕಂಚಿಮಾರುಕಟ್ಟೆ ಉತ್ಸವ, 3ರಂದು ಗೌರಿಮಾರುಕಟ್ಟೆ ಉತ್ಸವ ನಡೆಯಲಿದೆ. ಜತೆಗೆ ಡಿ.2ಮತ್ತು 3ರಂದು ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 89ನೇ ಅಧಿವೇಶನವೂ ಜರುಗಲಿದೆ. ನ.4ರಂದು ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆಯೊಂದಿಗೆ ಲಕ್ಷದಿಪೋತ್ಸವ ಕಾರ್ಯಕ್ರಮಗಳು ಸಮಾಪನಗೊಳ್ಳಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net