

ಕಲಘಟಗಿ: ಕಿಡಿಗೇಡಿಗಳು ಭತ್ತದ ಬಣವೆಗೆ ಬೆಂಕಿ ಹಚ್ಚಿದ ಪರಿಣಾಮ ಬಣವೆ ಸುಟ್ಟು ಕರಕಲಾದ ಘಟನೆ ತಾಲೂಕಿನ ಗಳಗಿಹುಲಕೊಪ್ಪ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಗಳಗಿಹುಲಕೊಪ್ಪ ಗ್ರಾಮದ ರೈತ ಮಹಾದೇವ ಸೂರಣ್ಣವರ ಎಂಬುವವರಿಗೆ ಸೇರಿದ ಬಣವೆ ಇದಾಗಿದ್ದು, 8 ಎಕರೆ ಹೊಲದಲ್ಲಿ ಬೆಳೆದ ಭತ್ತದ ಬಣವೆ ಬೆಂಕಿಗೆ ಆಹುತಿಯಾಗಿದೆ.
ಒಂದು ವಾರದ ಹಿಂದಷ್ಟೇ ಇದೇ ರೈತನ ಮೆಕ್ಕೆಜೋಳದ ಬಣವೆಗೂ ಬೆಂಕಿ ತಾಗಿತ್ತು. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.