

ಬೆಂಗಳೂರು: ಹಲವು ಸಂಘಟನೆಗಳ ಸದಸ್ಯರ ವಿರುದ್ಧ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ 35 ಕ್ರಿಮಿನಲ್ ಮೊಕದ್ದಮೆಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯು 35 ಕ್ರಿಮಿನಲ್ ಕೇಸ್ ಹಿಂಪಡೆಯುವ ಪ್ರಸ್ತಾವನೆಗೆ ಅಸ್ತು ಎಂದಿದೆ.
ಸಂಘ-ಪರಿವಾರ, ಕನ್ನಡಪರ, ರೈತಪರ ಸಂಘಟನೆಗಳ ಸದಸ್ಯರ ವಿರುದ್ಧ ವಿವಿಧ ಠಾಣೆಗಳಲ್ಲಿ ಹೂಡಿರುವ ದಾವೆಗಳನ್ನು ಕೈಬಿಡಲು ಸಚಿವ ಸಂಪುಟದ ಉಪ ಸಮಿತಿ ತೀರ್ಮಾನಿಸಿ, ಶಿಫಾರಸು ಮಾಡಿತ್ತು ಎಂದು ಮೂಲಗಳು ತಿಳಿಸಿವೆ.