ತನಿಖೆ ಪೂರ್ವ ಬೇಜವಾಬ್ದಾರಿ ಹೇಳಿಕೆ ಸರಿಯಲ್ಲ

DSC_9197
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ನೇಹಾ ಕೊಲೆ ಪ್ರಕರಣದ ತನಿಖೆ ಆರಂಭಿಸುವ ಪೂರ್ವದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವರು ನೀಡಿದ ಹೇಳಿಕೆ ಸರಿ ಇರಲಿಲ್ಲ. ತನಿಖೆ ಮೊದಲೇ ನೀಡುವ ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ ಎಂದು ನಿವೃತ್ತ ಪೊಲೀಸ್​ ಅಧಿಕಾರಿ ಜ್ಯೋತಿ ಪ್ರಕಾಶ ಮಿಜಿರ್ ದೂರಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಸೂಕ್ತ ತನಿಖೆ ನಡೆಯುವವರೆಗೂ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಆ ವಿಷಯವಾಗಿ ಮಾತನಾಡಬಾರದು. ರಾಜ್ಯದ ಪೊಲೀಸರು ತನಿಖೆ ನಡೆಸಲು ಸಮರ್ಥರಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪೊಲೀಸ್​ ಇಲಾಖೆ ಯಾವುದೇ ಪಕ್ಷಕ್ಕೆ ಸೀಮಿತವಲ್ಲ. ಹೀಗಾಗಿ ನೇಹಾ ಪ್ರಕರಣ ತನಿಖೆ ನಿಷ್ಪಕ್ಷಪಾತವಾಗಿ ನಡೆದು ಸತ್ಯ ಹೊರಗೆ ಬರುವ ಕಾಯಬೇಕು ಎಂದರು.
ರಾಜಕೀಯ ಕುರಿತು ಪ್ರತಿಕ್ರಿಯಿಸಿದ ಮಿಜಿರ್, ಜೆಡಿಎಸ್​ ಮತ್ತು ಬಿಜೆಪಿ ಮೈತ್ರಿ ರಾಜ್ಯದಲ್ಲಿ ಫಲಪ್ರದವಾಗಿದೆ. 28 ಸ್ಥಾನಗಳು ಮೈತ್ರಿ ಪಾಲಾಗಲಿವೆ. ಜನರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉತ್ತಮ ಕೆಲಸಗಳನ್ನು ನೋಡಿ ಮತ ನೀಡುತ್ತಾರೆ. ಹೀಗಾಗಿ ಈ ಬಾರಿಯೂ ರಾಜ್ಯದಲ್ಲಿ ಅತ್ಯಧಿಕ ಸ್ಥಾನಗಳು ಗೆಲ್ಲುವುದು ನಿಶ್ಚಿತ ಎಂದರು.
ಕೇಂದ್ರ ಸಚಿವ ಪ್ರಲ್ಹಾದ ಹ್ಲಾದ ಜೋಶಿ ಧಾರವಾಡ ಕ್ಷೇತ್ರಕ್ಕೆ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರು ಗೆದ್ದರೆ ಅಭಿವೃದ್ಧಿ ಯೋಜನೆಗಳಿಗೆ ಅನುಕೂಲವಾಗಲಿದೆ. ಕಾಂಗ್ರೆಸ್​ ಗೆಲ್ಲಿಸಿದರೆ ಜಿಲ್ಲೆಗೆ ಯಾವುದೇ ಅನುಕೂಲ ಯೋಜನೆಗಳು ಸಿಗುವುದಿಲ್ಲ. ಹೀಗಾಗಿ ಮತದಾರರು ಮತ್ತೊಮ್ಮೆ ಜೋಶಿ ಅವರನ್ನೇ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಜೆಡಿಎಸ್​ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ, ಬಿ.ಬಿ. ಗಂಗಾಧರಮಠ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net