ತಂಬಾಕು ದುಷ್ಪರಿಣಾಮ ಕುರಿತು ಬೀದಿ ನಾಟಕ

thambaku(nataka)
Published on

ಮಡಿಕೇರಿ: ವಿಶ್ವ ಆರೋಗ್ಯ ದಿನದ ಪ್ರಯುಕ್ತ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳಿಂದ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ನಗರದ ರಾಜಸೀಟ್ ಮುಂಭಾಗದಲ್ಲಿ ಬೀದಿ ನಾಟಕ ನಡೆಯಿತು.


ಬೀದಿನಾಟಕದಲ್ಲಿ ಗಂಟಲಿನ ಕ್ಯಾನ್ಸರ್, ಮದ್ಯಪಾನ ಮತ್ತು ಧೂಮಪಾನದಿಂದ ಹೃದಯಾಘಾತ ಹಾಗೂ ಧೂಮಪಾನದ ಹೊಗೆಯ ಪ್ರಭಾವದಲ್ಲಿರುವ, ಚಟ ಇಲ್ಲದವರಿಗೂ ಆಗುವ ತೊಂದರೆಗಳ ಬಗ್ಗೆ ಮಾಹಿತಿ ನೀಡಲಾಯಿತು.


ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ.ವಿಶಾಲ್ ಕುಮಾರ್, ಪ್ರಾಂಶುಪಾಲ ಡಾ.ನರಸಿಂಹ ರೈ, ವೈದ್ಯಕೀಯ ಅಧೀಕ್ಷಕ ಡಾ.ಸೋಮಶೇಖರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ, ಮುಖ್ಯ ಆಡಳಿತಾಧಿಕಾರಿ ರೋಹಿಣಿ ಪಾಲ್ಗೊಂಡಿದ್ದರು.


ಬೀದಿ ನಾಟಕವನ್ನು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೊದಲನೆಯ ಹಾಗೂ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳು, ಕಿವಿ, ಮೂಗು ಗಂಟಲಿನ ವಿಭಾಗದ ಮುಖ್ಯಸ್ಥ ಡಾ.ಶ್ವೇತರವರು ಸಂಯೋಜಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net