ಒತ್ತಡ ರಹಿತವಾಗಿ ಬದುಕುವ ವಾತಾವರಣ ಅಗತ್ಯ

31gan10
Published on

ಕುಂದಾಪುರ: ಪಾಲಕರು ತಮ್ಮ ಮಕ್ಕಳನ್ನು ಅತ್ಯುತ್ತಮ ರೀತಿಯಲ್ಲಿ ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ಮಕ್ಕಳು ಹೃದಯ ಶ್ರೀಮಂತಿಗೆ ಬೆಳೆಸಿಕೊಳ್ಳುವಂತೆ ಮಾಡಿ, ಮಗುವಿನಲ್ಲಿ ಅಂಕ ಪಡೆಯುವುದಕ್ಕಿಂತ ಮುಖ್ಯವಾಗಿರುವುದು ಮಾನವೀಯ ಮೌಲ್ಯ. ಒತ್ತಡ ರಹಿತವಾಗಿ ಬದುಕುವ ವಾತಾವರಣ ಸೃಷ್ಟಿಸಿ ಎಂದು ಶಿಕ್ಷಕ ಹಾಗೂ ರಾಷ್ಟ್ರಮಟ್ಟದ ವ್ಯಕ್ತಿತ್ವ ವಿಕಸನದ ತರಬೇತುದಾರ ರಾಜೇಂದ್ರ ಭಟ್ ಹೇಳಿದರು.

ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರುಗಿದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪಾಲಕರ ಸಭೆಯಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ ಎಂಡ್ ಕಲ್ಚರಲ್ ಟ್ರಸ್ಟ್‌ನ ಅಧ್ಯಕ್ಷ ಕೆ.ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಸಂದೀಪ್ ಗಾಣಿಗ ಪ್ರಸಕ್ತ ಶೈಕ್ಷಣಿಕ ಚಟುವಟಿಕೆಗಳ ಕುರಿತು ಪಾಲಕರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಟಾಪ್ 10 ಸ್ಥಾನದಲ್ಲಿ ರ‌್ಯಾಂಕ್ ಪಡೆದ ಹಾಗೂ ಕೆ-ಸಿಇಟಿಯಲ್ಲಿ 5000 ಒಳಗಡೆ ರ‌್ಯಾಂಕ್ ಪಡೆದ ಒಟ್ಟು 22 ವಿದ್ಯಾರ್ಥಿಗಳನ್ನು ಬೆಳ್ಳಿ ಲೋಟ, ಬೆಳ್ಳಿ ನಾಣ್ಯ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಸಂಸ್ಥೆಯ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ, ಖಜಾಂಚಿ ಲಕ್ಷ್ಮೀನಾರಾಯಣ ಶೆಣೈ, ಹಿರಿಯ ರಸಾಯನ ಶಾಸ್ತ್ರ ಉಪನ್ಯಾಸಕ ರಮಾಕಾಂತ್ ರೇವಣ್‌ಕರ್, ಶ್ರೀ ವೆಂಕಟರಮಣ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು.

ಉಪ ಪ್ರಾಂಶುಪಾಲ ಸುಜಯ್ ಕೋಟೆಗಾರ್ ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಮಂಜುನಾಥ್ ಅತಿಥಿಯನ್ನು ಪರಿಚಯಿಸಿದರು. ಇಂಗ್ಲೀಷ್ ಉಪನ್ಯಾಸಕಿ ಅಮೃತಾ ಸನ್ಮಾನಿತರ ಪಟ್ಟಿ ವಾಚಿಸಿದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಭರತ ಚಂದ್ರ ಕೆ. ವಂದಿಸಿದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net