

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಭಾಷೆ ನಡವಳಿಕೆ, ಆಲೋಚನೆ ಕ್ರಮವನ್ನು ನಿಯಂತ್ರಿಸುತ್ತದೆ. ಕನ್ನಡ ಭಾಷೆ ಉಳಿಯಲು ಬಲಿಷ್ಠ ಸಂವಿಧಾನಿಕ ವ್ಯವಸ್ಥೆ ಬೇಕಾಗುತ್ತದೆ ಎಂದು ಮುಂಡಾಜೆ ಮುರಾರ್ಜಿ ದೇಸಾಯಿ ವಸತಿ ಶಾಲೆ ಸಹಶಿಕ್ಷಕ ಅರವಿಂದ ಚೊಕ್ಕಾಡಿ ಹೇಳಿದರು.
ಬೆಳ್ತಂಗಡಿ ತಾಲೂಕು ಆಡಳಿತ ಸೌಧ ಆವರಣದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಕನ್ನಡವನ್ನು ಬಳಸುವುದಕ್ಕಿಂತ ಹೆಚ್ಚು ಬೆಳೆಸಲು ಶ್ರಮಿಸಬೇಕು ಎಂದರು.
ತಾಲೂಕು ಕಸಾಪ ಅಧ್ಯಕ್ಷ ಡಿ.ಯದುಪತಿ ಗೌಡ ಮಾತನಾಡಿದರು. ತಹಸೀಲ್ದಾರ್ ಪೃಥ್ವಿ ಸಾನಿಕಮ್ ಅಧ್ಯಕ್ಷತೆ ವಹಿಸಿದ್ದರು.
ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ., ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ತುಳುಪುಳೆ, ಅಬಕಾರಿ ಉಪನಿರೀಕ್ಷಕ ಸಯ್ಯದ್ ಶಬೀರ್, ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ, ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿ ಜೋಸೆಫ್ ಪಿ.ಎಸ್.,ತೋಟಗಾರಿಕೆ ಇಲಾಖೆ ಹಿ.ಸ.ನಿ ಚಂದ್ರಶೇಖರ್ ಕೆ.ಎಸ್., ವಲಯ ಅರಣ್ಯಾಧಿಕಾರಿ ತ್ಯಾಗರಾಜ ಟಿ.ಎನ್., ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ವಿ.ಪ್ರತಿಮಾ, ಸಹಿತ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ ಎಂ., ಡಾ.ಅರ್ಷಿಯಾ ಕಾರ್ಯಕ್ರಮ ನಿರೂಪಿಸಿದರು. ಇದಕ್ಕೂ ಮುನ್ನ ಮಾರಿಗುಡಿ ಮೈದಾನದಿಂದ ತಾಲೂಕು ಆಡಳಿತ ಸೌಧದ ವರೆಗೆ ಮೆರವಣಿಗೆ ನಡೆಸಿದರು.