ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ

Published on

 ಪಿಎಸ್‌ಐ ಸೈಯದ್ ಅನ್ಸರ್ ಅಭಿಮತ

ಪಾತಪಾಳ್ಯ: ಮಾದಕ ವಸ್ತುಗಳು ಯುವಜನರಿಗೆ ಮಾರಕವಾಗಿ ಪರಿಣಮಿಸಿದ್ದು, ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಸದೃಢ ಸಮಾಜ ನಿರ್ಮಿಸಲು ಸಾಧ್ಯ ಎಂದು ಪಾತಪಾಳ್ಯ ಪೋಲೀಸ್ ಠಾಣೆಯ ಪಿಎಸ್‌ಐ ಸೈಯದ್ ಅನ್ಸರ್ ತಿಳಿಸಿದರು.

ಪಾತಪಾಳ್ಯ ಪೋಲೀಸ್ ಠಾಣೆಯಿಂದ ಗುರುವಾರ ಹಮ್ಮಿಕೊಂಡಿದ್ದ ಮಾದಕ ವಸ್ತು ವಿರೋಧಿ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಮಾದಕವಸ್ತು ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಮಿದುಳು, ಹೃದಯ, ಶ್ವಾಸಕೋಶ ಹಾಗೂ ಯಕೃತ್ತಿನಂತಹ ಪ್ರಮುಖ ಅಂಗಗಳಿಗೆ ಹಾನಿ ಉಂಟುಮಾಡುತ್ತದೆ. ರೋಗ ನಿರೋಧಕ ಶಕ್ತಿ ಕುಂಠಿತಗೊಂಡು ಸೋಂಕುಗಳಿಗೆ ತುತ್ತಾಗುವ ಸಾಧ್ಯತೆ ಹೆಚ್ಚಾಗುತ್ತದೆ ಎಂದರು.

ಪ್ರಭಾರ ಮುಖ್ಯಶಿಕ್ಷಕ ಎಸ್.ಅರ್. ಸುರೇಂದ್ರಬಾಬು ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನತೆ ಅತ್ಯಂತ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು. ಅನೇಕ ಪ್ರಕರಣಗಳಲ್ಲಿ ಉತ್ತಮರು ಅರಿವಿಲ್ಲದೆ ಮಾದಕ ವಸ್ತುಗಳ ಜಾಲದಲ್ಲಿ ಸಿಲುಕಿ ಹೊರಬರಲಾರದೆ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದರು.

ಎಎಸ್‌ಐ ಬಿ.ಎಸ್. ನಂಜುಂಡಶರ್ಮ, ರಾಜು, ಶಿಕ್ಷಕರಾದ ಎಂ.ಎಸ್. ಶ್ರೀನಿವಾಸನ್, ದೈಹಿಕ ಶಿಕ್ಷಣ ಶಿಕ್ಷಕ ಸಿದ್ದರಾಮಣ್ಣ ಕರಿಗೌಡರ್, ಅತಿಥಿ ಶಿಕ್ಷಕರಾದ ನಾಗರಾಜ, ಶಿರಿಶಾ, ವಾಣಿ, ರಶ್ಮಿ ಹಾಗೂ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net