ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ!

PES university
Published on

ಬೆಂಗಳೂರು: ಕಾಲೇಜು ಕಟ್ಟಡದಿಂದ ಜಿಗಿದು 21 ವರ್ಷದ ಇಂಜಿನಿಯರಿಂಗ್​ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ.

5ನೇ ಮಹಡಿಯಿಂದ ಹಾರಿ ಕರಸಾಲ ರಾಹುಲ್(21) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತಃ ಆಂಧ್ರಪ್ರದೇಶದ ಕರ್ನೂಲಿ ಮೂಲದವರು. ಇವರ ಕುಟುಂಬ ಕೆಲ ವರ್ಷಗಳಿಂದ ಬಳ್ಳಾರಿಯಲ್ಲಿ ನೆಲೆಸಿದ್ದರು. ಇನ್ನು ಮೃತ ವಿದ್ಯಾರ್ಥಿಯನ್ನು ರಾಹುಲ್ ಎಂದು ಗುರುತಿಸಲಾಗಿದೆ. ರಾಹುಲ್ ಕಂಪ್ಯೂಟರ್ ಸೈನ್ಸ್ ವಿಭಾಗದ ಐದನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ

ಸದ್ಯ ಪರಪ್ಪನ ಅಗ್ರಹಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದು, ಘಟನಾ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net