ಜ್ಞಾನಾಭಿವೃದ್ಧಿಗೆ ವಿದ್ಯಾರ್ಥಿ ಮಿತ್ರ ಪೂರಕ

SIDDAPUR VIDYARTHI MITRA
Published on

ಸಿದ್ದಾಪುರ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಎಲ್ಲ ವಿಷಯಗಳನ್ನು ಒಳಗೊಂಡಿರುವ ‘ವಿಜಯವಾಣಿ ವಿದ್ಯಾರ್ಥಿ- ಉದ್ಯೋಗ ಮಿತ್ರ’ ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆಯಲು ಹಾಗೂ ಜ್ಞಾನವೃದ್ಧಿಗೆ ಪೂರಕವಾಗಿದೆ ಎಂದು ಅಣಲೇಬೈಲ್ ಗ್ರಾಪಂ ಪಿಡಿಒ ಸುಬ್ರಹ್ಮಣ್ಯ ಹೆಗಡೆ ಹೇಳಿದರು.
ತಾಲೂಕಿನ ಕಿಬ್ಬಳ್ಳಿಯ ಮಹಾಗಣಪತಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸೋಮವಾರ ವಿಜಯವಾಣಿ ವಿದ್ಯಾರ್ಥಿ ಉದ್ಯೋಗ ಮಿತ್ರ ಪತ್ರಿಕೆ ವಿತರಿಸಿ ಅವರು ಮಾತನಾಡಿದರು.
ಪ್ರೌಢಶಾಲೆಯ ಅಧ್ಯಕ್ಷ ನಾಗಪತಿ ಭಟ್ಟ ಮಿಳಗಾರ ವಿದ್ಯಾರ್ಥಿ ಮಿತ್ರ ಪತ್ರಿಕೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಪತ್ರಕರ್ತ ರಮೇಶ ಹಾರ್ಸಿಮನೆ ಮಾತನಾಡಿದರು. ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅನಿತಾ ಬಿ. ಸಿರ್ಸಿಕರ್ ಸ್ವಾಗತಿಸಿದರು. ಶಿಕ್ಷಕ ಶಿವಾನಂದ ಎಚ್.ಎಂ. ಹಾಗೂ ಶ್ರೀಧರ ಬಪ್ಪನಕೊಡ್ಲು ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net