ಖಾಸಗಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

medical student vishnupriya
Published on

ಶಿವಮೊಗ್ಗ: ನಗರದ ಖಾಸಗಿ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿ ಇಂಟರ್ನ್‌ಶಿಪ್ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ವಿಷ್ಣುಪ್ರಿಯಾ (22) ಆತ್ಮಹತ್ಯೆ ಮಾಡಿಕೊಂಡವರು. ಈಕೆ ಖಾಸಗಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದು ಕೋರ್ಸ್ ಮುಗಿಸಿ ಇಂಟರ್ನ್‌ಶಿಪ್ ಮಾಡುತ್ತಿದ್ದರು. ವಿದ್ಯಾರ್ಥಿನಿ ಪಾಲಕರು ಮೂಲತಃ ಬೆಂಗಳೂರಿನವರಾಗಿದ್ದು ಹಾಲಿ ಬೆಹರೈನ್ ದೇಶದಲ್ಲಿ ನೆಲೆಸಿದ್ದಾರೆ.

ಇಂಟರ್ನ್‌ಶಿಪ್ ಮುಗಿಯಲು 10 ದಿನ ಬಾಕಿ ಉಳಿದಿರುವಾಗ ಆತ್ಮಹತ್ಯೆ ಮಾಡಿಕೊಂಡಿದ್ದು ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯಾರ್ಥಿನಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net