

ವಿಜಯವಾಣಿ ಸುದ್ದಿಜಾಲ ಹೆಬ್ರಿ
ಅಮೃತಭಾರತಿ ಶಾಲೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕ ಚಟುವಟಿಕೆ ಮಾಡುತ್ತಿದೆ. ಭಾರತೀಯ ಸಂಸ್ಕೃತಿಯ ಶಿಕ್ಷಣ ನೀಡುತ್ತಿದ್ದು, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಅಗತ್ಯ ವಾತಾವರಣ ಮಾಡಿಕೊಡುತ್ತಿದೆ ಎಂದು ಹೆಬ್ರಿ ಠಾಣೆ ಎಎಸ್‌ಐ ದಯಾಕರ್ ಪ್ರಸಾದ್ ಹೇಳಿದರು.
ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಆಯೋಜಿಸಿದ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಪ್ರಾಂತಮಟ್ಟದ ವಾಲಿಬಾಲ್ ಟೂರ್ನಿ ಉದ್ಘಾಟಿಸಿ ಮಾತನಾಡಿದರು.
ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಅಧ್ಯಕ್ಷರು ಪಾಂಡುರಂಗ ಪೈ ಸಿದ್ದಾಪುರ ಅಧ್ಯಕ್ಷತೆ ವಹಿಸಿದ್ದರು. ಅಮೃತ ಭಾರತಿ ಟ್ರಸ್ಟ್ ಅಧ್ಯಕ್ಷ ಸಿಎ ಎಂ.ರವಿರಾವ್ ಹೆಬ್ರಿ, ಕಾರ್ಯದರ್ಶಿ ಗುರುದಾಸ್ ಶೆಣೈ, ಅಮೃತ ಭಾರತಿ ವಿದ್ಯಾಲಯ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ, ಪಾಂಡುರಂಗ ರಮಣ ನಾಯಕ್ ಪದವಿ ಪೂರ್ವ ಕಾಲೇಜು ಸಂಚಾಲಕ ರಾಜೇಶ್ ನಾಯಕ್, ಟ್ರಸ್ಟ್ ಸದಸ್ಯರಾದ ಬಾಲಕೃಷ್ಣ ಮಲ್ಯ, ಭಾಸ್ಕರ್ ಜೋಯಿಸ್ ಹೆಬ್ರಿ, ಅಮೃತ ಭಾರತಿ ವಿದ್ಯಾಲಯದ ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶಕುಂತಳಾ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಅಮರೇಶ್ ಹೆಗ್ಡೆ, ವಿದ್ಯಾ ಕೇಂದ್ರ ಪ್ರಾಂಶುಪಾಲ ಅರುಣ್ ಎಚ್.ವೈ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಅನಿತಾ ಉಪಸ್ಥಿತರಿದ್ದರು.
ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಕಾರ್ಯದರ್ಶಿ ಮಹೇಶ ಹೈಕಾಡಿ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ಶಾರೀರಿಕ ಪ್ರಮುಖ್ ವಿಜಯಕುಮಾರ್ ಶೆಟ್ಟಿ ಸ್ವಾಗತಿಸಿದರು. ನಿಶಾನ್ ಗುರೂಜಿ ವಂದಿಸಿದರು. ಅನಿತಾ ಮಾತಾಜಿ ನಿರೂಪಿಸಿದರು.