ಚಾಮುಂಡಿ ಸನ್ನಿಧಿಯಲ್ಲಿ ಕಸ ಗುಡಿಸಿದ ವಿಜಯೇಂದ್ರ

Vijayendra 12 Jan 20
Published on

ಮೈಸೂರು: ನಾಡ ದೇವತೆ ಶ್ರೀ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪೊರಕೆ ಹಿಡಿದು ಕಸ ಗುಡಿಸಿದರು.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಭಾನುವಾರ ಮಹಾನಗರ ಪಾಲಿಕೆ ಮತ್ತು ರೋಟರಿ ನೇತೃತ್ವದಲ್ಲಿ ಸ್ವಚ್ಛ ಭಾರತ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಅಭಿಯಾ‌ನದಲ್ಲಿ ಪಾಲ್ಗೊಂಡಿದ್ದ ವಿಜಯೇಂದ್ರ ಅವರು ಪೊರಕೆ ಹಿಡಿದು ಕಸ ಗುಡಿಸಿದರು.

ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಎಲ್.ನಾಗೇಂದ್ರ, ಎಚ್.ವಿ.ರಾಜೀವ್ ಸೇರಿದಂತೆ ಹಲವರು ಅಭಿಯಾನದಲ್ಲಿ ಭಾಗವಹಿಸಿದ್ದರು.

ಇನ್ನು ಭಾನುವಾರ 7ನೇ ದಿನದ ನವರಾತ್ರಿ ಸಂಭ್ರಮ ಕಳೆಗಟ್ಟಿದ್ದು, ಚಾಮುಂಡಿ ಬೆಟ್ಟಕ್ಕೆ ಭಕ್ತರ ದಂಡು ಹರಿದು ಬರುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net