ಹೈಡ್ರೋಜಿನ್ ತುಂಬಿದ್ದ ಟ್ಯಾಂಕರ್ ಪಲ್ಟಿ

h17-hydrozen
Published on

ಹುಬ್ಬಳ್ಳಿ: ಹೈಡ್ರೋಜಿನ್ ತುಂಬಿಕೊಂಡು ಹೊರಟಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ ರಾಯನಾಳ ಸೇತುವೆ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ.
ಬೆಳಗಾವಿಯಿಂದ ಬೆಂಗಳೂರಿಗೆ ಹೊರಟಿದ್ದ ಟ್ಯಾಂಕರ್ ಅಜಾಗರೂಕತೆಯಿಂದ ಪಲ್ಟಿಯಾಗಿತ್ತು. ಒಂದೂವರೆ ತಾಸಿಗೂ ಹೆಚ್ಚು ಸಮಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಕಂಡುಬಂದಿತ್ತು. ಮಾಹಿತಿ ತಿಳಿದ ಡಿಸಿಪಿ ಸಿ.ಆರ್. ರವೀಶ ಅವರು, ಖುದ್ದು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಬಿದ್ದಿದ್ದ ಟ್ಯಾಂಕರ್ ಸಾಗಣೆಗೆ ವ್ಯವಸ್ಥೆ ಕಲ್ಪಿಸಿದ್ದರು. ಅಗ್ನಿಶಾಮಕ ದಳ ಹಾಗೂ ಪೊಲೀಸರ ಸಹಾಯದೊಂದಿಗೆ ಎಲ್ಲ ಸಮಸ್ಯೆಗೆ ನಾಂದಿಹಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net