ಪೌಷ್ಟಿಕ ಆಹಾರ ಪರಿಶೀಲಿಸಿದ ಭಾಸ್ಕರ್ ನೇತೃತ್ವದ ತಂಡ

16Kush02
ಕೂಡ್ಲೂರು ಕೈಗಾರಿಕಾ ಘಟಕ ಆವರಣದಲ್ಲಿರುವ ಪೌಷ್ಟಿಕ ಅಹಾರ ಉತ್ಪಾದನಾ ಕೇಂದ್ರಕ್ಕೆ ಭಾಸ್ಕರ್ ನಾಯಕ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲಿಸಿತು. ಬೊಗಪ್ಪ, ಸಂತೋಷ್, ವಿಮಲಾ ಇದ್ದರು.
Published on

ಕುಶಾಲನಗರ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಕೈಗಾರಿಕಾ ಘಟಕ ಆವರಣದಲ್ಲಿರುವ ಮಹಿಳಾ ಪೂರಕ ಪೌಷ್ಟಿಕ ಆಹಾರ ಉತ್ಪಾದನಾ ಕೇಂದ್ರಕ್ಕೆ (ಎಂ.ಎಸ್.ಪಿ.ಸಿ) ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ನೇತೃತ್ವದ ತಂಡ ಇತ್ತೀಚೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಸೋಮವಾರಪೇಟೆ, ಕುಶಾಲನಗರ ತಾಲೂಕು ವ್ಯಾಪ್ತಿಯ ಅಂಗನವಾಡಿ ಮತ್ತು ಬಾಣಂತಿಯರಿಗೆ ಕೇಂದ್ರದ ವತಿಯಿಂದ ಪೌಷ್ಟಿಕ ಆಹಾರ ವಿತರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವಸ್ತುಗಳನ್ನು ತಂಡ ಪರಿಶೀಲನೆ ನಡೆಸಿತು.

ಕೇಂದ್ರದಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಜತೆಗೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ನೀಡುವಂತೆ ಅಲ್ಲಿನ ಸಿಬ್ಬಂದಿಗೆ ಅಧ್ಯಕ್ಷರು ಸೂಚಿಸಿದರು.

ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಕೆ.ಕೆ.ಭೋಗಪ್ಪ, ಸೋಮವಾರಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಕೆ.ಜಿ.ವಿಮಲಾ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಸಂತೋಷ್ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net