ಕೊಲೆಗಾರರ ಪತ್ತೆಗೆ ತಂಡ ರಚನೆ

IMG_20240821_215013.jpg
Published on

ಬೆಳಗಾವಿ: ತಾಲೂಕಿನ ಕರ್ಲೆ ಗ್ರಾಮದಲ್ಲಿ ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿದ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಇಡಾ ಮಾರ್ಟಿನ್ ಮಾರ್ಬನ್ಯಾಂಗ್ ಹೇಳಿದರು.ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ಲೆ ಗ್ರಾಮದ ಮೋಹನ ತಳವಾರ(52) ವ್ಯಕ್ತಿಯನ್ನು ಹತ್ಯೆ ಮಾಡಿದ ಆರೋಪಿಗಳ ಸುಳಿವು ಸಿಕ್ಕಿದ್ದು, ಆದಷ್ಟು ಬೇಗ ಬಂಧಿಸಲಾಗುವುದು. ಯಾವ ಕಾರಣಕ್ಕೆ ಹತ್ಯೆ ಮಾಡಿದ್ದಾರೆ ಎಂಬುದು ತಿಳಿದು ಬಂದಿಲ್ಲ ಎಂದರು. ಬೆಳಗಾವಿಯಲ್ಲಿ ಪಾರ್ಕಿಂಗ್ ಸಮಸ್ಯೆ ಇರುವ ಕಡೆಗಳಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ. ಶೀಘ್ರ ಮಹಾನಗರ ಪಾಲಿಕೆಯ ಆಯುಕ್ತರೊಂದಿಗೆ ಸಭೆ ನಡೆಸಿ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದರು. ನಗರದಲ್ಲಿ ಸರಗಳ್ಳತನ, ಮನೆಗಳ್ಳತನ ಹಾಗೂ ಅಂಗಡಿ ಕಳ್ಳತನದ ಪ್ರಕರಣಗಳು ನಡೆಯುತ್ತಿವೆ. ಅದಕ್ಕೊಂದು ವಿಶೇಷ ತಂಡ ರಚಿಸಿ ಮತ್ತೆ ಮರುಕಳಿಸದಂತೆ ನೋಡಿಕೊಳ್ಳಲಾಗುವುದು. ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು. ಸರಗಳ್ಳತನವಾದಾಗ ನೇರವಾಗಿ 112ಗೆ ಕರೆ ಮಾಡಿ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net