ಅಸ್ವಸ್ಥರಾಗಿದ್ದವರ ಮನೆಗಳಿಗೆ ಅಧಿಕಾರಿಗಳ ತಂಡ ಭೇಟಿ

2
ಅಲಗಾಪುರ ಗ್ರಾಮದಲ್ಲಿ ಅಸ್ವಸ್ಥರಾದವರ ಮನೆಗಳಿಗೆ ಆರೋಗ್ಯಾಧಿಕಾರಿ ತಂಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಡಾ. ರಾಜೇಶ್‌ಕುಮಾರ್, ಡಾ.ಪ್ರಕಾಶ್ ಇತರರು ಇದ್ದರು.
Published on

ಹನೂರು: ತಾಲೂಕಿನ ಅಲಗಾಪುರ ಗ್ರಾಮದಲ್ಲಿ ಕಲುಷಿತ ನೀರು ಹಾಗೂ ಆಹಾರ ಸೇವನೆಯಿಂದ 6 ಜನರು ಅಸ್ವಸ್ಥರಾಗಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಮಲೇರಿಯಾ ಅಧಿಕಾರಿ ಡಾ.ರಾಜೇಶ್ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್ ಅವರಿದ್ದ ತಂಡ ಮನೆಗಳಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಗ್ರಾಮದಲ್ಲಿ ಸೋಮವಾರ ಕಾರ್ಯಕ್ರಮವೊಂದರಲ್ಲಿ ಕಲುಷಿತ ಆಹಾರ ಹಾಗೂ ನೀರು ಸೇವನೆಯಿಂದ 6 ಜನರಿಗೆ ವಾಂತಿ-ಭೇದಿ ಕಾಣಿಸಿಕೊಂಡು ಬಂಡಳ್ಳಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಮನೆಗೆ ಮರಳಿದ್ದರು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆರೋಗ್ಯಾಧಿಕಾರಿಗಳ ತಂಡ ಅಸ್ವಸ್ಥರಾಗಿದ್ದವರ ಮನೆಗಳಿಗೆ ತೆರಳಿ ಆರೋಗ್ಯ ವಿಚಾರಿಸಿ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net